ವಿಶ್ವ ಜನಸಂಖ್ಯಾ ದಿನಾಚರಣೆ ಜಾಥಾಕ್ಕೆ ಸದಾಶಿವಶ್ರೀಗಳು, ಶಾಸಕ ಓಲೇಕಾರ ಚಾಲನೆ


ಹಾವೇರಿ26: ಇಂದು ಜನಸಂಖ್ಯೆ ನಾಗಾಲೋಟದಲ್ಲಿ ಬೆಳೆಯುತ್ತಿದ್ದು, ದೇಶದ ಪ್ರಗತಿಗೆ ಮಾನವ ಸಂಪನ್ಮೂಲ ವರವಾಗುವ ಬದಲು ಶಾಪವಾಗಿ ಪರಿಣಮಿಸಿದೆ ಎಂದು ಸಾಹಿತಿ ಹನುಮಂತಗೌಡ ಗೊಲ್ಲರ ಅವರು ಹೇಳಿದರು.

ನಗರದ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಆಸ್ಪತ್ರೆ, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಸ್ಥಳೀಯ ಸಂಘ-ಸಂಸ್ಥೆಗಳ ಹಾಗೂ ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಮಾತನಾಡಿದರು.

1987ರಲ್ಲಿ ಜನಸಂಖ್ಯೆ 5 ಬಿಲಿಯನ್ ಮುಟ್ಟಿದ ಕಾರಣ ಜನಸಂಖ್ಯೆ ನಿಯಂತ್ರಣ ಜಾಗೃತಿಗಾಗಿ ಜುಲೈ 11 ರಿಂದ  `ವಿಶ್ವ ಜನಸಂಖ್ಯಾ ದಿನ' ಹಮ್ಮಿಕೊಂಡು  ಜನಸಂಖ್ಯೆ ಸ್ಫೋಟದಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಈ ದಿನಾಚರಣೆ ಆಚರಿಸಲಾಗುತ್ತಿದೆ. ನಮ್ಮ ದೇಶದ ಜನಸಂಖ್ಯೆ 129.68 ಕೋಟಿಯಾಗಿದೆ. ಇದೇ ವೇಗದಲ್ಲಿ ಜನಸಂಖ್ಯೆ ಹೆಚ್ಚಾದರೆ 2028ರ ವೇಳೆಗೆ ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಿ ಭಾರತ  ಮೊದಲ ಸ್ಥಾನಕ್ಕೆ ಬರಲಿದೆ. ಕಾರಣ ಎಲ್ಲರೂ ಜನಸಂಖ್ಯೆ ಸ್ಫೋಟದಿಂದಾಗುವ ದುಷ್ಪರಿಣಾಮಗಳ ಕುರಿತು ತಿಳಿದುಕೊಳ್ಳುವುದು ಹಾಗೂ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. 

ವಿಶ್ವದ ಜನಸಂಖ್ಯೆ 1804ರಲ್ಲಿ 100 ಕೋಟಿ, 1930ರಲ್ಲಿ 200 ಕೋಟಿ, 1794ರಲ್ಲಿ 400 ಕೋಟಿ ಹಾಗೂ 2017ರಲ್ಲಿ 700 ಕೋಟಿಯಾಗಿ ಬೆಳವಣಿಗೆ ಹೊಂದುತ್ತಿದೆ. 2055ರವೇಳೆ ಜಗತ್ತಿನ ಜನಸಂಖ್ಯೆ 1000ಕೋಟಿ ದಾಟಲಿದೆ ಎಂದು ಅಂದಾಜಿಸಲಾಗಿದೆ.  ಒಂದು ದಿನಕ್ಕೆ 2.81 ಲಕ್ಷ ಶಿಶುಗಳ ಜನನವಾದರೆ  ಶೇ.1.16ರಷ್ಟು ಪ್ರಮಾಣದ ಶಿಶುಗಳು ಮರಣ ಹೊಂದುತ್ತವೆ ಎಂದು ವರದಿ ತಿಳಿಸುತ್ತವೆ. 

ಅಧಿಕ ಜನಸಂಖ್ಯೆಯಿಂದ  ಪೌಷ್ಠಿಕ ಆಹಾರದ ಕೊರತೆ, ನಿರುದ್ಯೋಗ, ನೀರು, ವಸತಿ,  ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಕಾಡುತ್ತಿವೆ. ಅನಕ್ಷರತೆ ಕಾರಣವಾಗಿದೆ ಹಾಗೂ ಗಂಡು ಸಂತಾನದ ವ್ಯಾಮೋಹ ಕೂಡ ಕಾರಣವಾಗಿದೆ. ನಾವು ಮೊದಲು ಮೂಢನಂಬಿಕೆ ಹಾಗೂ ಮೌಢ್ಯ ಬಿಡಬೇಕು. ಲಿಂಗಾನುಪಾತ ಸರಾಸರಿಯಲ್ಲಿ 1000 ಪುರುಷರಿಗೆ 940 ಮಹಿಳೆಯರಿದ್ದಾರೆ. ಲಿಂಗಾನುಪಾತದಲ್ಲಿ ಸಮತೋಲನಾ ಕಾಯ್ದುಕೊಳ್ಳುವುದು ಇಂದಿನ ಅಗತ್ಯವಾಗಿದೆ. ಯುವ ಸಮೂಹಕ್ಕೆ ಜನಸಂಖ್ಯಾ ಬೆಳವಣಿಗೆಯಿಂದ ಎದುರಾಗಬಹುದಾದ ಸಮಸ್ಯೆಗಳ ಕುರಿತು  ಮೂಡಿಸುವುದು ಅವಶ್ಯವಾಗಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ ಅವರು ಪ್ರಾಸ್ತಾವಿಕವಾಗಿ  ಮಾತನಾಡಿ, ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಯಿಂದ ಇಂದು ಅನೇಕ ಸಮಸ್ಯೆಗಳನ್ನು ಎದುರಿಸಲಾಗುತ್ತಿದೆ.  ವಿಶ್ವದಲ್ಲಿ ಒಂದು ಸೆಕೆಂಡಿಗೆ 500 ಶಿಶುಗಳ ಜನನವಾಗುತ್ತದೆ. ರಾಜ್ಯದ ಜನಸಂಖ್ಯೆ 6.10 ಕೋಟಿ ಹಾಗೂ ಜಿಲ್ಲೆಯ ಜನಸಂಖ್ಯೆ 17.50 ಲಕ್ಷವಾಗಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಸಕರ್ಾರ ಕುಟುಂಬ ಕಲ್ಯಾಣ ಯೋಜನೆ ಜಾರಿಗೊಳಿಸಿದೆ. ಮೊದಲಿಗಿಂತ ತಾಯಿ ಹಾಗೂ ಶಿಶು ಮರಣ ಪ್ರಮಾಣ ಕಡಿಮೆಯಾಗಿದೆ. ಜನಸಂಖ್ಯೆ ನಿಯಂತ್ರಣ ಕುರಿತು ಆರೋಗ್ಯ ಇಲಾಖೆಯಿಂದ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಿವಲಿಂಗೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಸವಿತಾ ಹಿರೇಮಠ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ರಾಮಚಂದ್ರ ಕುದರಿ, ಬಿ.ವಿ.ಹೂಗಾರ, ಕಂಬಳಿ, ವಿದ್ಯಾಲಯದ ಉಪನ್ಯಾಸಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಅವರು ಸ್ವಾಗತಿಸಿದರು. ಶಂಕರ ಸುತಾರ ಅವರು ಕಾರ್ಯಕ್ರಮ ನಿರೂಪಿಸಿದರು.

 ಜಾಥಾಕ್ಕೆ ಚಾಲನೆ: ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಾಥಾ ಕಾರ್ಯಕ್ರಮಕ್ಕೆ ಹುಕ್ಕೇರಿಮಠದ ಸದಾಶಿವ ಶ್ರೀಗಳು ಹಾಗೂ ಶಾಸಕರಾದ ನೆಹರು ಓಲೇಕಾರ ಅವರು ಚಾಲನೆ ನೀಡಿದರು. ಸಂದರ್ಭದಲ್ಲಿ ಹಾಗೂ ಇತರರು ಉಪಸ್ಥಿತರಿದ್ದರು.