ಜಿಲ್ಲಾಡಳಿತ ಭವನದಲ್ಲಿ ಸದ್ಬಾವನಾ ದಿನಾಚರಣೆ
Sadbhavana Day celebration at the District Administration Building
ಗದಗ 20: ಪ್ರತಿ ವರ್ಷ ಆಗಸ್ಟ್ 20 ರಂದು ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಸದ್ಬಾವನಾ ದಿನಾಚರಣೆ ನಡೆಸಲಾಗುತ್ತದೆ. ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರು ಜಿಲ್ಲಾಡಳಿತ ಭವನದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳಿಗೆ ಹಾಗೂ ನೆರೆದ ಸಾರ್ವಜನಿಕರಿಗೆ ಬುಧವಾರ ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಸದ್ಬಾವನಾ ದಿನದ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಿದರು.
ನಾನು ಭಾರತ ರಾಷ್ಟ್ರದ ಜನರ ನಡುವೆ ಧರ್ಮ, ಭಾಷೆ, ಪ್ರದೇಶ ಅಥವಾ ಜಾತಿ ಭೇದವಿಲ್ಲದೆ ಭ್ರಾತೃತ್ವ, ಏಕತೆ ಮತ್ತು ಶಾಂತಿಯನ್ನು ಕಾಪಾಡುವಲ್ಲಿ ನನ್ನ ಪಾತ್ರವನ್ನು ನಿರ್ವಹಿಸುತ್ತೇನೆ. ಹಿಂಸೆ, ಅಸಹಿಷ್ಣುತೆ ಮತ್ತು ಅಸಮಾನತೆ ವಿರುದ್ಧ ನಿಲ್ಲುತ್ತೇನೆ ಎಂದು ಎಲ್ಲರೂ ಪ್ರತಿಜ್ಞೆ ಸ್ವೀಕರಿಸಿದರು.ಸಮಾಜದಲ್ಲಿ ಸೌಹಾರ್ದತೆ, ಸಹಬಾಳ್ವೆ ಮತ್ತು ರಾಷ್ಟ್ರೀಯ ಏಕತೆ ಬೆಳೆಸುವುದು. ಧರ್ಮ, ಜಾತಿ, ಭಾಷೆ, ಪ್ರದೇಶಗಳ ಭೇದವಿಲ್ಲದೆ ಮಾನವೀಯತೆ, ಸಹಿಷ್ಣುತೆ ಮತ್ತು ಶಾಂತಿ ಕಾಪಾಡುವುದು.ದೇಶದ ಯುವಪೀಳಿಗೆಗೆ ಏಕತೆಯ ಸಂದೇಶ ನೀಡುವುದು ಈ ಸದ್ಭಾವನಾ ದಿನಾಚರಣೆಯ ಉದ್ದೇಶವಾಗಿದೆ.ಈ ವೇಳೆ ಅಪರ ಜಿಲ್ಲಾಧಿಕಾರಿ ದುರಗೇಶ್ ಕೆಆರ್, ಎಸಿ ಗಂಗಪ್ಪ ಎಂ, ಜಿಲ್ಲಾದಿಕಾರಿಗಳ ಕಾನೂನು ಸಲಹೆಗಾರ ಎಸ್ ಜಿ ಪಲ್ಲೇದ್, ಬಿಸಿಎಂ ಜಿಲ್ಲಾ ಅಧಿಕಾರಿ ಎಂ ಎಂ ತುಂಬರಮಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಮದಿಗಳು ಉಪಸ್ಥಿತರಿದ್ದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಪ್ರವಾಸಗದಗ 20: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ ನಾಗಣ್ಣಗೌಡ ಅವರು ಆಗಸ್ಟ್ 21ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ಇವರ ಅಂತಿದೆ.ಆಗಸ್ಟ್ 21 ರಂದು ಬೆಳಿಗ್ಗೆ 9:00 ಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸುವರು. ನಂತರ ಮಧ್ಯಾಹ್ನ 2:30 ರಿಂದ 5:30ರ ವರೆಗೆ ಪ್ರಗತಿ ಪರಶೀಲನಾ ಸಭೆ ಜರುಗಿಸಲಿದ್ದಾರೆ.ಪ್ರವಾಸ ಸಂದರ್ಭದಲ್ಲಿ ಅಧ್ಯಕ್ಷರೊಂದಿಗೆ ಆಯೋಗದ ಸದಸ್ಯರುಗಳಾದ ಶೇಖರಗೌಡ ರಾಮತ್ನಾಳ, ಶಶಿಧರ್ ಕೋಸಂಬೆ, ಡಾ. ತಿಪ್ಪೇಸ್ವಾಮಿ ಕೆಟಿ, ಎಸ್ ಮಂಜು, ವೆಂಕಟೇಶ್ ಹಾಗೂ ಶ್ರೀಮತಿ ಅಪರ್ಣಾ ಎಂ ಕೊಳ್ಳಾ ಅವರುಗಳು ಪಾಲ್ಗೊಳ್ಳುವರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 