ಹಲಗಾದಲ್ಲಿ ಸುರಕ್ಷಿತ ಗ್ರಾಮ ಜಾಗೃತಿ
Safe Village Awareness in Halaga
ಲೋಕದರ್ಶನ ವರದಿ
ಹಲಗಾ , ಬೆಳಗಾವಿ 01:- ಮಕ್ಕಳ ಕಳ್ಳ ಸಾಗಾಣಿಕೆ ಹಾಗೂ ಬಾಲ್ಯವಿವಾಹ ಸಮಾಜಕ್ಕೆ ಮಾರಕವಾಗಿದ್ದು ಪ್ರತಿಯೊಬ್ಬರು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು,ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ, ಅಥವಾ ಯಾವುದೇ ರೀತಿಯ ಶೊಷಣೆ ಕಂಡು ಬಂದಲ್ಲಿ ತಕ್ಷಣ ಸಂಭಂದಿಸಿದ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಹಿಡಕಲ್ ಡ್ಯಾಂ ಶಕ್ತಿ ಸದನದ ಸಲಹಾಗಾರರಾದ ಸುಗಂಧಾ ಅಳ್ಳಟ್ಟಿ ಕರೆ ನೀಡಿದರು.
ಆಪರೇಶನ ರೆಡ್ ಅಲರ್ಟ, ಹೈದರಾಬಾದ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಸುರಕ್ಷಿತ ಗ್ರಾಮ ಕಾರ್ಯಕ್ರಮದ ಅಡಿಯಲ್ಲಿ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಮಕ್ಕಳ ಕಳ್ಳ ಸಾಗಾಣಿಕೆ, ಬಾಲ್ಯವಿವಾಹ, ಪೋಕ್ಸೋ ಕಾಯಿದೆ, ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾಹಿತಿ ನೀಡಿದರು
ಕ್ಷೇತ್ರ ಸಂಯೋಜಕರಾದ ಶಂಕರ ಕತ್ತಿ ಮಾತನಾಡಿ ಮಕ್ಕಳ ಹಕ್ಕುಗಳು, ಶಿಕ್ಷಣದ ಮಹತ್ವ ಹಾಗೂ ಸುರಕ್ಷಿತ ಬಾಲ್ಯ ನಿರ್ಮಾಣದಲ್ಲಿ ಪೋಷಕರು,ಶಿಕ್ಷಕರು ಮತ್ತು ಸಮುದಾಯದ ಪಾತ್ರ ಅತ್ಯಂತ ಮಹತ್ವದಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಬಸವರಾಜ ಅಲಾಬದಿ ಹಾಗೂ ಶಿಕ್ಷಕ ವೃಂದದವರು ಹಾಗೂ ಸುಮಾರು 230 ಮಕ್ಕಳು ಉಪಸ್ಥಿತರಿದ್ದರು.ಎಲ್ಲ ಮಕ್ಕಳಿಗೆ ಸುರಕ್ಷಿತ ಗ್ರಾಮ ಕೈಪಿಡಿಯನ್ನು ನೀಡಲಾಯಿತು.
ನಂತರ ಹಲಗಾ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಮುದಾಯದ ನಾಯಕರಿಗೆ ತಾಯಂದಿಯರಿಗೆ ಜಾಗೃತಿ ಸಭೆ ನಡೆಸಲಾಯಿತು ಸಭೆಯಲ್ಲಿ ಮಕ್ಕಳ ಕಳ್ಳ ಸಾಗಾಣಿಕೆ ತಡೆ ಬಾಲ್ಯವಿವಾಹದ ದುಷ್ಪರಿಣಾಮಗಳು,ಪೋಕ್ಸೋ ಕಾಯಿದೆಯ ಪ್ರಮುಖ ಅಂಶಗಳು ಹಾಗೂ ಮಕ್ಕಳ ಹಕ್ಕುಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು ಗ್ರಾಮ ಮಟ್ಟದಲ್ಲಿ ಮಕ್ಕಳ ರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವೆಂದು ತಿಳಿಸಲಾಯಿತು ಈ ಸಂದರ್ಭದಲ್ಲಿ ಹಲಗಾ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಶ್ವೇತಾ ಡಿ ಆರ್ ಕಾರ್ಯದರ್ಶಿಗಳಾದ ಜೆ ಎ ಫರ್ನಾಂಡಿಸ್, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 