ಬೆಳೆ ನಷ್ಟ, ವಿಮೆ ಪರಿಹಾರ ಬಿಡುಗಡೆಗೆ ಸಗರ ಆಗ್ರಹ
Sagar demands release of crop loss, insurance compensation
ಬೆಳೆ ನಷ್ಟ, ವಿಮೆ ಪರಿಹಾರ ಬಿಡುಗಡೆಗೆ ಸಗರ ಆಗ್ರಹ
ದೇವರಹಿಪ್ಪರಗಿ 06: ಅತಿವೃಷ್ಟಿ ಮಳೆಯಿಂದ ಎಲ್ಲ ಬೆಳೆ ನಷ್ಟ ಸಮೀಕ್ಷೆ ನಡೆಸಿ ಪರಿಹಾರ, ಬೆಳೆ ವಿಮೆ ಹಣ ಬಿಡುಗಡೆ ಗೊಳಿಸಬೇಕು, ಪ್ರತಿ ಹೆಕ್ಟರ್ ಗೆ 50ಸಾವಿರ ಬೆಳೆ ಪರಿಹಾರ ಒದಗಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಹಾಗೂ ತಾಲೂಕು ಘಟಕದ ವತಿಯಿಂದ ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಕಳೆದ ಕೆಲ ವರ್ಷದಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಮತ್ತು ಪ್ರಸ್ತುತ ವರ್ಷದಲ್ಲಿ ಅತಿಯಾದ ಮಳೆಯಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ರೈತರು ಬೆಳೆದ ಎಲ್ಲಾ ಬೆಳೆಗಳು ಸಂಪೂರ್ಣವಾಗಿ ಹಾನಿಯಾಗಿವೆ. ರೈತರು ಸಾಲ ಮಾಡಿ ಬೆಳೆದ ಬೆಳೆ ಇನ್ನೇನು ರಾಶಿ ಮಾಡಬೇಕೆಂಬ ಪರಿಸ್ಥಿತಿಯಲ್ಲಿ ಅತಿಯಾದ ಮಳೆಯಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಪಡೆದ ಸಾಲವನ್ನು ಸಂಪೂರ್ಣ ಸರ್ಕಾರ ಮನ್ನಾ ಮಾಡಬೇಕು, ಪ್ರತಿ ಹೆಕ್ಟೇರಿಗೆ 50ಸಾವಿರ ಬೆಳೆ ಪರಿಹಾರ ಒದಗಿಸಬೇಕು ಹಾಗೂ ರೈತರು ಕಟ್ಟಿದ ಬೆಳೆ ವಿಮೆ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಕೃಷಿ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು.
ತಾಲೂಕು ಘಟಕದ ಅಧ್ಯಕ್ಷ ಈರ್ಪ ಕುಳೇಕುಮಟಗಿ, ಗೌರವಾಧ್ಯಕ್ಷ ಶಿವಾನಂದ ಹಿರೇಮಠ, ಮಹಿಳಾ ಘಟಕದ ಸುನಂದಾ ಸೊನ್ನಳ್ಳಿ, ಪ್ರಭಾವತಿ ಬಸರಕೋಡ, ಅಂಬವ್ವ ಬಿರಾದಾರ, ನಿಂಗಣ್ಣ ಬೋರಾವತ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ರೈತ ಮುಖಂಡರು ಹಾಗೂ ಸುತ್ತಮುತ್ತಲಿನ ಗ್ರಾಮದ ರೈತರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 