ಫೆ.28ಕ್ಕೆ ಸಂತ ಸೇವಾಲಾಲರ ಜಯಂತ್ಯುತ್ಸವ
Saint Sevalal's Jayanti on February 28th
ದೇವರಹಿಪ್ಪರಗಿ 10: ಪಟ್ಟಣದಲ್ಲಿ ಸಂತ ಸೇವಾಲಾಲರ 287ನೇ ಜಯಂತ್ಯುತ್ಸವ ಸಮಾರಂಭದ ಫೆಬ್ರವರಿ.28ಕ್ಕೆ ಸಮುದಾಯದ ಮುಖಂಡರು ನೇಮಿಸಿದ್ದಾರೆ.
ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ತಾಲೂಕು ಘಟಕದ ಉಪಾಧ್ಯಕ್ಷರಾದ ಸುರೇಶ ಚವ್ಹಾಣ ಮನವಿ ಮಾಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣ ಸೇರಿದಂತೆ 30 ಗ್ರಾಮಗಳ ತಾಂಡಾದ ಸಕಲ ಪದಾಧಿಕಾರಿಗಳು ಹಾಗೂ ಮುಖಂಡರು ಸೇರಿ ಫೆಬ್ರುವರಿ 28ರಂದು ಜಯಂತಿ ಆಚರಣೆಗೆ ನಿರ್ಧರಿಸಲಾಯಿತು.
ಸ್ವಾಮೀಜಿಗಳಿಗೆ, ರಾಜಕೀಯ ಮುಖಂಡರಿಗೆ ಆಹ್ವಾನ ನೀಡುವುದು, ಶಾಸಕರು ಸೇರಿದಂತೆ ಎಲ್ಲಾ ರಾಜಕೀಯ ಮುಖಂಡರನ್ನು ಆಮಂತ್ರಿಸುವದು ಸೇರಿದಂತೆ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ವಿಷಯಗಳು ಚರ್ಚಿಸಲಾಯಿತು. ಸರ್ವ ಸಮುದಾಯದ ಮುಖಂಡರ ಸಹಕಾರದೊಂದಿಗೆ ಜಯಂತೋತ್ಸವ ದಂದು ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಿಂದ ಸೇವಾಲಾಲ್ ವೃತ್ತದ ವರೆಗೆ ಮೆರವಣಿಗೆ ಹಮ್ಮಿಕೊಳ್ಳುವುದು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಘಟಕದ ಅಧ್ಯಕ್ಷರಾದ ಈಶ್ವರ ಚವ್ಹಾಣ ಮಾತನಾಡಿ, ಕಾರ್ಯಕ್ರಮ ಯಶಸ್ವಿಗೆ ಎಲ್ಲರ ಸಹಕಾರ ಮುಖ್ಯ. ಈ ಬಾರಿ ಜಯಂತೋತ್ಸವ ಅರ್ಥಪೂರ್ಣವಾಗಿ ಆಚರಣೆ ಮಾಡೋಣ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ತಾಲೂಕು ಘಟಕದ ಅಧ್ಯಕ್ಷರಾದ ಈಶ್ವರ ಚವ್ಹಾಣ, ಉಪಾಧ್ಯಕ್ಷರಾದ ಸುರೇಶ ಚವ್ಹಾಣ, ನಿವೃತ್ತ ಅಧಿಕಾರಿಗಳಾದ ಮುದುಕಪ್ಪ ಚವ್ಹಾಣ, ಮುಖಂಡರುಗಳಾದ ದೀಪಕ ಸೇಠ, ಅಶೋಕ ಪವಾರ,ವಿನೋದ, ನವೀನ, ಜಗದೀಶ, ಗೋಪಾಲ, ಕಾಮ ಸಿಂಗ್, ಶಾಂತ್ತು, ದೀಲೀಪ, ದೀಪಕ್ಕ, ಧರ್ಮು, ರಾಮಜಿ, ಗೋಪಾಲ, ಗೋಪಿಚಂದ್, ಸಂಜು, ಮಾರುತಿ, ಭೀಮ್ ಸಿಂಗ್, ಮೋಹನ್, ಕೆ.ಪಿ. ರಾಠೋಡ, ಶಂಕರ, ರಾಮು, ಪರಮಣ್ಣ, ಅಶೋಕ ಸೇರಿದಂತೆ ತಾಲೂಕಿನ 30ತಾಂಡಾ ಗ್ರಾಮಗಳ ಪದಾಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 