ಇಂಡಿ 15: ತಾಲೂಕಿನಾದ್ಯಂತ ಸಂತ ಸೇವಾಲಾಲ್ ಅವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅದರಂತೆ ಇಂಡಿ ನಗರದ ಮಿನಿ ವಿಧಾನಸೌಧ ಆವರಣದಲ್ಲಿ ಕೂಡಾ ಸಂತ ಸೇವಾಲಾಲ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಬೆಳೆಗೆ ಹತ್ತು ಗಂಟೆಗೆ ಇಂಡಿ ಗ್ರೇಡ್ 2 ತಹಶೀಲ್ದಾರ ಶ್ರೀ ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು ಸಂತ ಸೇವಾಲಾಲ್ ಮಹಾರಾಜರು, ಬಂಜಾರ ಸಮುದಾಯದ ಆರಾಧ್ಯ ದೈವ ಕೂಡ ಹೌದು, ಅವರು ಸಮಾಜದ ಪ್ರಗತಿಯಲ್ಲಿ ಧರ್ಮದ ಪಾತ್ರವನ್ನು ಒತ್ತಿ ಹೇಳಿದವರು. ತಮ್ಮ ಪವಾಡ, ಲೀಲೆಗಳನ್ನು ಪ್ರದರ್ಶನ ಮಾಡುತ್ತಾ, ಜನ ಮನದಲ್ಲಿ ಗುರುವಿನ ಸ್ಥಾನ ಪಡೆದವರು. ಜನತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸಿದ ಸೇವಾಲಾಲರು ಸತ್ಯ, ಅಹಿಂಸೆ, ತ್ಯಾಗ ಮನೋಭಾವದ ನೀತಿ ಮಾತು,ಭರತ ಖಂಡದ ಧಾರ್ಮಿಕ ರಾಯಭಾರಿ ಎಂದೇ ಹೆಸರಾಗಿದ್ದ ಸಂತ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಇಂಡಿ ಪುರಸಭೆ ಅಧ್ಯಕ್ಷರಾದ ನಿಂಬಾಜಿ ರಾಠೋಡ, ಶೀರಸದಾರ ಬಸವರಾಜ ರಾವೂರ, ಎಚ್ ಎಸ್ ಮುಜಗೊಂಡ, ಆರ್ ಬಿ ಮೂಗಿ, ಆಹಾರ ನೀರೀಕ್ಷಕರಾದ ಶಂಕರ ಹೂಗಾರ,ಬಳ್ಳೊಳ್ಳಿ ಕಂದಾಯ ನೀರೀಕ್ಷಕರಾದ ಬಸವರಾಜ ಅವಜಿ, ಇಂಡಿ ಕಂದಾಯ ನೀರೀಕ್ಷಕರಾದ ಎಚ್ ಎಚ್ ಗುನ್ನಾಪೂರ, ಗ್ರಾಮ ಆಡಳಿತ ಅಧಿಕಾರಿಗಳಾದ ಮಹೇಶ್ ರಾಠೋಡ, ಸಿದ್ದು ಪೂಜಾರಿ, ಪ್ರಕಾಶ್ ಚವಡಿಹಾಳ, ಮಹಾತೇಶ ಗುರುಬಟ್ಟ, ಎಮ್ ಕೆ ಕೊಡತೆ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಬಂಜಾರ ಹಾಗೂ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.