ಉಪ್ಪಿನಂಗಡಿ : ಗ್ಯಾಸ್ ಟ್ಯಾಂಕರ್ ಪಲ್ಟಿ; ಅನಿಲ ಸೋರಿಕೆ
ಮಂಗಳೂರು , ಮಾ 28, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಡಿ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ತಿರುವಿನಲ್ಲಿ ಅನಿಲ ಸಾಗಿಸುವ ಬುಲೆಟ್ ಟ್ಯಾಂಕರೊಂದು ಶನಿವಾರ ಮುಂಜಾನೆ ಪಲ್ಟಿಯಾಗಿದೆ. ಈ ವೇಳೆ ಟ್ಯಾಂಕರ್ ಹಾನಿಗೀಡಾಗಿದ್ದು, ಅನಿಲ ಸೋರಿಕೆಯಾಗಿದೆ. ಶನಿವಾರ ಮುಂಜಾನೆ ಬೆದ್ರೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಮಗುಚಿ ರಸ್ತೆ ಬದಿಗೆ ಬಿದ್ದಿದೆ. ಈ ವೇಳೆ ಚಾಲಕ ಅಪಾಯದಿಂದ ಪಾರಾಗಿದ್ದು, ಅನಿಲ ಸೋರಿಕೆ ಉಂಟಾಗಿದೆ. ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾರ್ಯಚರಣೆ ನಡೆಸಲಾಯಿತು.ಘಟನೆಯ ಹಿನ್ನೆಲೆಯಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಯಿತು. ಇಂದು ದ.ಕ . ಜಿಲ್ಲೆಯಲ್ಲಿ ಪೂರ್ಣ ಬಂದ್ ಇದ್ದ ಕಾರಣ ರಸ್ತೆಯಲ್ಲಿ ವಾಹನ ಸಂಚಾರ ಕನಿಷ್ಠ ಪ್ರಮಾಣದಲ್ಲಿತ್ತು. ಸ್ಥಳಕ್ಕೆ ಎಚ್.ಪಿ. ತುರ್ತು ನಿರ್ವಹಣಾ ದಳ, ಅಗ್ನಿಶಾಮಕ ದಳ, ಹಾಗೂ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ, ಅನಿಲ ಸೋರಿಕೆ ತಡೆಗಟ್ಟುವ ಕಾರ್ಯಚರಣೆ ನಡೆಸಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 