ಲಕ್ಷ್ಮೇಶ್ವರದಲ್ಲಿ ಟಿ.ಬಿ. ಮಾಣ್ವಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ
Samagra Veeragrani' Award for T.B. Manvi Government Pre-University College in Lakshmeshwar
ಲಕ್ಷ್ಮೇಶ್ವರದಲ್ಲಿ ಟಿ.ಬಿ. ಮಾಣ್ವಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ
ಲಕ್ಷ್ಮೇಶ್ವರ, ಸೆ.11: ಪಟ್ಟಣದ ಶ್ರೀ ಟಿ.ಬಿ. ಮಾಣ್ವಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2026-27ನೇ ಸಾಲಿನ ಲಕ್ಷ್ಮೇಶ್ವರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ‘ಸಮಗ್ರ ವೀರಾಗ್ರಣಿ ಪ್ರಶಸ್ತಿ’ ಮುಡಿಗೇರಿಸಿಕೊಂಡಿದ್ದಾರೆ.
ಸೆಪ್ಟೆಂಬರ್ 2 ಮತ್ತು 3ರಂದು ಲಕ್ಷ್ಮೇಶ್ವರದ ಶ್ರೀ ಟಿ.ಬಿ. ಮಾಣ್ವಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಆತಿಥ್ಯದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಕ್ರೀಡಾ ಸಂಚಾಲಕರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಕಾಲೇಜಿನ ಪ್ರಾಚಾರ್ಯ ಮಂಜುನಾಥ ಕೊಕ್ಕರಗುಂದಿ ಅವರ ಮಾರ್ಗದರ್ಶನ, ಕ್ರೀಡಾ ಸಂಚಾಲಕ ಡಾ. ಎಸ್.ಬಿ. ಎಟ್ಟಿ ಅವರ ನೇತೃತ್ವ ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಸಹಕಾರದಿಂದ ಟಿ.ಬಿ. ಮಾಣ್ವಿ ಕಾಲೇಜು ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ವಿವಿಧ ಕ್ರೀಡೆಗಳಲ್ಲಿ ಉತ್ತಮ ಸಾಧನೆ
ಕಾಲೇಜಿನ ವಿದ್ಯಾರ್ಥಿಗಳು ಕಬಡ್ಡಿ, ವಾಲಿಬಾಲ್, ಥ್ರೋಬಾಲ್, ಖೋ-ಖೋ ಹಾಗೂ ಬ್ಯಾಡ್ಮಿಂಟನ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಕ್ರೀಡಾ ಸಾಧನೆ ಹಾಗೂ ಉಪನ್ಯಾಸಕರ ಪರಿಶ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಜನಪ್ರಿಯ ಶಾಸಕ ಡಾ. ಚಂದ್ರು ಲಮಾಣಿ ಶ್ಲಾಘಿಸಿ, ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಉಪಾಧ್ಯಕ್ಷ ಸುಧೀಲ್ ಮಹಾಂತಶೆಟ್ಟರ್ ಹಾಗೂ ಸಮಿತಿ ಸದಸ್ಯರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ತೋಂಟೇಶ ಮಾಣ್ವಿ, ಬಸವರಾಜ ಚಕ್ರಸಾಲಿ, ಶಕ್ತಿ ಕತ್ತಿ, ಮಂಜುನಾಥ ಗೊರವರ, ಗೀರೀಶ ಚೌರಡ್ಡಿ, ಮುನ್ನಾ ಸೂರಣಗಿ, ನವೀನ ಬೆಳ್ಳಟ್ಟಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಪ್ರಾಚಾರ್ಯ ಮಂಜುನಾಥ ಕೊಕ್ಕರಗುಂದಿ, ಕ್ರೀಡಾ ಸಂಚಾಲಕ ಡಾ. ಎಸ್.ಬಿ. ಎಟ್ಟಿ, ಹಿರಿಯ ಉಪನ್ಯಾಸಕರಾದ ಬಿ.ಎನ್. ದೊಡ್ಡಮನಿ, ಡಾ. ಬಿ.ಎಂ. ಮರಳಿಹಳ್ಳಿ, ಎನ್.ಒ. ಸಾತಪುತೆ, ಪರಮೇಶ್ವರ ಲಮಾಣಿ, ಸದಾನಂದ ನಡುವಿನಮನಿ, ರವಿ ಹೊನ್ನತ್ತಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 