ಗದಗ 27: ಗದಗ ಪಶುವೈದ್ಯಕೀಯ ಮಹಾವಿದ್ಯಾಲಯದಿಂದ ದಿ. 23ರಿಂದ 29ರವರೆಗೆ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದಡಿಯಲ್ಲಿ ದಿ. 26ರಂದು ಉಚಿತ ಪಶು ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ. ಸಂತೋಷ ಸಾರಂಗಮಠ., ಡಾ. ಶ್ರೀಕಾಂತ ಕಲಬುರ್ಗಿ, ಡಾ. ಸೋಮಶೇಖರ ಹಬಗೊಂಡೆ, ಡಾ. ಪ್ರದೀಪ ಚವ್ಹಾಣ, ಡಾ. ಸುಪ್ರೀತ್, ಡಾ. ಕ್ಸೇವಿಯರ್, ಡಾ. ಮಾಲತಿ, ಡಾ. ನಾಗಭೂಷಣ, ಡಾ. ನಿಕಿತಾ, ಪಶುಪಾಲನ ಇಲಾಖೆಯಿಂದ ಡಾ. ಎ. ಕೆ. ಗಾಣಿಗೇರ, ಹಿರಿಯ ಪಶುವೈದ್ಯಾಧಿಕಾರಿಗಳು ಮತ್ತು ಧಾರವಾಡ-ಗದಗ ಹಾಲು ಒಕ್ಕೂಟದ ಪಶುವೈದ್ಯಾಧಿಕಾರಿಗಳಾದ ಡಾ. ಎಕನಾಥ್ ರವರು ಭಾಗವಹಿಸಿದ್ದರು. ಶಿಬಿರದಲ್ಲಿ ಸುಮಾರು 50 ಜಾನುವಾರುಗಳಿಗೆ ಉಚಿತವಾಗಿ ಚಿಕಿತ್ಸೆ ಮಾಡಲಾಯಿತು. ಪಶುವೈದ್ಯಕೀಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕರಾದ ಡಾ. ಸತೀಶ ಚಂದ್ರ ಬಿರಾದಾರ್ ಮತ್ತು ಪಶುವೈದ್ಯಕೀಯ ಮಹಾವಿದ್ಯಾಲಯದ ಎರಡನೇ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಂಜೆ ನಡೆದ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ. ಸುರೇಶ ವಿ ನಾಡಗೌಡರ, ಕುಲಪತಿಗಳು ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ವಿಶ್ವವಿದ್ಯಾಲಯ, ಗದಗ ರವರು ಗ್ರಾಮೀಣಾಭಿವೃದ್ಧಿಯ ಬಗ್ಗೆ ಮಾತನಡಿದರು. ಕಾರ್ಯಕ್ರಮದಲ್ಲಿ ಅಬ್ದುಲ್ ಅಜೀಜ್, ಸಹಾಯಕ ನಿರ್ದೇಶಕರು, ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ವಿಶ್ವವಿದ್ಯಾಲಯ, ಊರಿನ ಗಣ್ಯರು, ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ. ಎಸ್. ವಿ. ಹಿರೇಮಠ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.