ಧಾರವಾಡ ಮಾರ್ಚ್ 03: ಧಾರವಾಡ ಸಂಶೋಧನಾ ವೃತ್ತ ವ್ಯಾಪ್ತಿಯಲ್ಲಿ ಬರುವ ಸಂಶೋಧನಾ ವಲಯ ಧಾರವಾಡದಲ್ಲಿ ಫೆಬ್ರವರಿ 25 ರಂದು ಗುಂಗರಗಟ್ಟಿ ಅರಣ್ಯ ಅಕಾಡೆಮಿಯ ಸಂಭಾಗಣದಲ್ಲಿ ಆಯೋಜಿಸಿದ್ದ ಶ್ರೀಗಂಧದ ಆಧರಿತ ಕೃಷಿ ಅರಣ್ಯ ವ್ಯವಸ್ಥೆಗಳು ಮತ್ತು ಇದರ ಹಾರ್ಟವುಡ್ ಎಂಬ ವಿಷಯದ ಮೇಲೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಕಾರ್ಯಾಗಾರವನ್ನು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಬಿ.ಪಿ. ರವಿ, ಉದ್ಘಾಟಿಸಿದರು. ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯತೀಶ್ ಕುಮಾರ್ ಡಿ. ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಜಂಟಿ ನಿರ್ದೇಶಕ ಮರಿಯಾ ಕ್ರಿಸ್ತು ರಾಜಾ ಡಿ, ಭಾಗವಹಿಸಿದ್ದರು. ಕಾರ್ಯಾಗಾರದಲ್ಲಿ ಸಂಶೋಧನೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ ಎನ್. ಹಪ್ಪಳದ ಅವರು ಸ್ವಾಗತಿಸಿದರು. ಸಂಶೋಧನೆ ವಲಯದ ವಲಯ ಅರಣ್ಯ ಅಧಿಕಾರಿ ಮಹಾಂತೇಶ ಪೆಟ್ಲೂರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಾಗಾರದಲ್ಲಿ ಬೆಂಗಳೂರು ಮೂಲದ ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಖ್ಯಾತ ವಿಜ್ಞಾನಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಭಾಗವಹಿಸಿದ ಎಲ್ಲ ರೈತ ಮತ್ತು ಇಲಾಖೆಯ ಮುಂಚೂಣಿ ಸಿಬ್ಬಂದಿಯೊಂದಿಗೆ ಶ್ರೀಗಂಧದ ಆಧರಿತ ಕೃಷಿ ಅರಣ್ಯ ವ್ಯವಸ್ಥೆಗಳು ಮತ್ತು ಇದರ ಹಾರ್ಟವುಡ್ ಕುರಿತ ಅಂದಾಜಿಸುವಿಕೆಯ ಬಗ್ಗೆ ಅಮೂಲ್ಯ ಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ತಿಳಿಸಿದರು.
ಕಾರ್ಯಾಗಾರದಲ್ಲಿ ಹಿರಿಯ ಅಧಿಕಾರಿಗಳು, ಸಂಶೋಧನಾ ವೃತ್ತದ ಸಿಬ್ಬಂದಿ ಮತ್ತು ಹಾವೇರಿ, ಧಾರವಾಡ, ಗದಗ, ಬೆಳಗಾವಿ ಜಿಲ್ಲೆಗಳ ರೈತರು ಉಪಸ್ಥಿತರಿದ್ದರು.(ಫೋಟೊ ಇದೆ)