ಸಂಡೂರು: ಮತಗಟ್ಟೆ ಅಧಿಕಾರಿಗಳ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಭೇಟಿ, ಅಗತ್ಯ ನಿರ್ದೇಶನ
Sandur: Deputy Commissioner Nagendra Prasad K visits polling booth officer training center, provides
ಬಳ್ಳಾರಿ 10: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ಮತ್ತು ಮತಗಟ್ಟೆ ಮೇಲ್ವಿಚಾರಕರಿಗೆ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆದ ನಾಗೇಂದ್ರ ಪ್ರಸಾದ್.ಕೆ ಅವರು ಖುದ್ದಾಗಿ ಭೇಟಿ ನೀಡಿ ಪರೀಶೀಲಿಸಿದರು.ಸಂಡೂರು ಪಟ್ಟಣದ ಕುಮಾರಸ್ವಾಮಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರದಲ್ಲಿ ಪಾಲ್ಗೊಂಡ ಜಿಲ್ಲಾಧಿಕಾರಿಯವರು, ಎಸ್‌ಐಆರ್ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸುವ ಕುರಿತು ಅಧಿಕಾರಿಗಳಿಗೆ ಅಗತ್ಯ ಮಾಹಿತಿ ಮತ್ತು ಮಹತ್ವದ ನಿರ್ದೇಶನಗಳನ್ನು ನೀಡಿದರು. ಎಸ್‌ಐಆರ್ ಪ್ರಕ್ರಿಯೆಯ ಕರ್ತವ್ಯದಲ್ಲಿ ಯಾವುದೇ ರೀತಿಯ ಲೋಪದೋಷಗಳಿಗೆ ಆಸ್ಪದ ನೀಡಬಾರದು.
ಪ್ರತಿಯೊಬ್ಬ ಮತಗಟ್ಟೆ ಅಧಿಕಾರಿಯೂ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಎದುರಾಗಬಹುದಾದ ಸವಾಲುಗಳನ್ನು ಹೇಗೆ ನಿಭಾಯಿಸಬೇಕು ಎಂಬುದರ ಕುರಿತು ಸ್ಪಷ್ಟ ಜ್ಞಾನ ಹೊಂದಿರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಜಿಲ್ಲಾಧಿಕಾರಿಗಳೇ ಖುದ್ದಾಗಿ ಸ್ಥಳಕ್ಕೆ ಆಗಮಿಸಿ, ತರಬೇತಿಯ ಗುಣಮಟ್ಟವನ್ನು ಪರೀಶೀಲಿಸಿದ್ದಲ್ಲದೆ, ಅಧಿಕಾರಿಗಳ ಅನುಮಾನಗಳಿಗೆ ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿದರು.ತರಬೇತಿ ಕಾರ್ಯಾಗಾರದಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ನೋಡೆಲ್ ಅಧಿಕಾರಿ ಆದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ತಹಶೀಲ್ದಾರ ಅನಿಲ್ ಕುಮಾರ್, ಜಿಲ್ಲಾ ಚುನಾವಣಾಧಿಕಾರಿ ಕಚೇರಿಯ ನಿರಂಜನ ಸೇರಿದಂತೆ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 