ಸಿಂದಗಿ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಸಂಗಮೇಶ ಛಾಯಗೋಳ ಅವಿರೋಧ ಆಯ್ಕೆ
Sangamesh Chhayagol elected unopposed as Sindagi TAPCMS President
ದೇವರಹಿಪ್ಪರಗಿ 04: ಅಖಂಡ ಸಿಂದಗಿ ತಾಲ್ಲೂಕು ವ್ಯವಸಾಯೋತ್ಪನ್ನ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ದೇವರಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮದ ಸಂಗಮೇಶ ಛಾಯಗೋಳ ಉಪಾಧ್ಯಕ್ಷರಾಗಿ ಬಸವರಾಜ ಪಾಟೀಲ ಗುಂದಗಿ ಅವಿರೋಧವಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷ ಹಾಗೂ ಉಪಾದ್ಯಕ್ಷರ ಆಯ್ಕಗೆ ಬುಧವಾರ ಚುನಾವಣೆ ನಿಗಧಿಯಾಗಿತ್ತು. ಅಧ್ಯಕ್ಷ ಸ್ಥಾನ ಬಯಸಿ ಸಂಗಮೇಶ ಛಾಯಗೋಳ ಹಾಗೂ ಉಪಾದ್ಯಕ್ಷ ಸ್ಥಾನ ಬಯಸಿ ಬಸವರಾಜ ಪಾಟೀಲ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದನ್ನು ಬಿಟ್ಟರೆ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಆರ್.ಎನ್.ಆಳೂರ ಹಾಗೂ ತಾಲೂಕು ಅಭಿವೃದ್ಧಿ ಅಧಿಕಾರಿಗಳಾದ ಲೀಲಾವತಿ ಗೌಡ ನೂತನ ಅಧ್ಯಕ್ಷ ಹಾಗೂ ಉಪಾದ್ಯಕ್ಷರ ಆಯ್ಕೆಯನ್ನು ಪ್ರಕಟಿಸಿದರು. ನೂತನ ಅಧ್ಯಕ್ಷ ಸಂಗಮೇಶ ಛಾಯಗೋಳ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವರಾದ ಶಿವಾನಂದ ಪಾಟೀಲ, ಸಿಂದಗಿ ಮತಕ್ಷೇತ್ರದ ಶಾಸಕರಾದ ಅಶೋಕ ಮನಗೂಳಿ ಅವರ ಆಶೀರ್ವಾದ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಶಾಂತವೀರ ಬಿರಾದಾರ ರವರ ಸಹಕಾರದೊಂದಿಗೆ ರೈತಪರವಾದ ತಾಲ್ಲೂಕಿನ ಜನತೆ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಆಶೀರ್ವಾದ ಮಾಡಿದ್ದು ಎಲ್ಲಾ ನಿರ್ದೇಶಕರ ಸಹಕಾರದೊಂದಿಗೆ, ಸಂಘದ ಅಭಿವೃದ್ಧಿ ಮತ್ತು ರೈತರ ಹಿತಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡುವುದೇ ನನ್ನ ಧ್ಯೇಯ ಮತ್ತು ಸಂಸ್ಥೆಯನ್ನು ಅಭಿವೃದ್ದಿಯ ಕಡೆಗೆ ತೆಗೆದುಕೊಂಡು ಹೋಗಲು ಶ್ರಮಿಸುತ್ತೇನೆ ಎಂದರು. ನಂತರ ಮುಖಂಡರಗಳು ನೂತನ ಅಧ್ಯಕ್ಷ ಹಾಗೂ ಉಪಾದ್ಯಕ್ಷರು ಸಂಸ್ಥೆ ಹಾಗೂ ರೈತರ ಆಶೋತ್ತರಗಳನ್ನು ಈಡೇರಿಸುವ ಕೆಲಸ ಮಾಡಲಿ ಎಂದು ಶುಭಕೋರಿ, ಸನ್ಮಾನಿಸಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ತಾಪಂ ಸದಸ್ಯ ಮಲ್ಲನಗೌಡ ಬಿರಾದಾರ, ಚೇತನಗೌಡ ಬಿರಾದಾರ ಬನ್ನೆಟ್ಟಿ, ಭೀಮನಗೌಡ ಬಿರಾದಾರ ಗಬಸಾವಳಗಿ, ಆನಂದ ಚಟ್ಟರಕಿ ಕೆರೂಟಗಿ, ಜಗದೀಶ ಪಾಟೀಲ ಕೊಂಡಗೂಳಿ, ಭೀಮನಗೌಡ ಗೊಬ್ಬರ, ಅಶೋಕ ಸಿದರಡ್ಡಿ,ಸಲಿಂ ವಠಾರ, ಅರವಿಂದ ರಾಠೋಡ, ವಿಜಯ ಚವ್ಹಾಣ, ಶರಣಗೌಡ ಪಾಟೀಲ, ಭೋಜನಗೌಡ ಬಿರಾದಾರ ಸೇರಿದಂತೆ ಸದಸ್ಯರು, ಅಧಿಕಾರಿಗಳು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 