ಸಂಗೊಳ್ಳಿ ರಾಯಣ್ಣ ಗೆಳೆಯರ ಬಳಗ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಅನ್ನ ಸಂತರ್ಪಣೆ
Sangolli Rayanna Friends' Group: Mahaprasas Program
ಕೊಪ್ಪಳ 30: ತಾಲೂಕಿನ ಕಿನ್ನಾಳ ಗ್ರಾಮದ ಕನಕದಾಸ ವೃತ್ತದ ಬಳಿ ಹೊಸಮನಿ ಕ್ರಾಸ್ ಹತ್ತಿರ ಕ್ರಾಂತೀವೀರ ಶ್ರೀ ಸಂಗೊಳ್ಳಿ ರಾಯಣ್ಣ ಗೆಳೆಯರ ಬಳಗದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ಸಹ ಗ್ರಾಮದ ಹಿರಿಯ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯ ರಾದ ಪ್ರಸನ್ನ ಗಡಾದ್ ಮತ್ತು ಇನ್ನೋರ್ವ ಗ್ರಾಮದ ಮುಖಂಡ ಮತ್ತು ತಾಲೂಕ ಪಂಚಾಯಿತಿಯ ಮಾಜಿ ಅಧ್ಯಕ್ಷ ಅಮರೇಶ್ ಉಪಲಾಪುರ ಮಾರ್ಗದರ್ಶನ ಮತ್ತು ಜಂಟಿ ನೇತೃತ್ವದಲ್ಲಿ ಗೆಳೆಯರ ಬಳಗದ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಅಭಿಮಾನಿಗಳು ಸೇರಿ ಗ್ರಾಮದ ಗುರು ಹಿರಿಯರ ಮಾರ್ಗದರ್ಶನ ಮತ್ತು ಸಹಕಾರದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಕಿನ್ನಾಳ ಕಾ ರಾಜಾ ಎಂಬ ಹೆಸರಿನ ಗಣೇಶ್ ಮೂರ್ತಿ ಪ್ರತಿಷ್ಠಾಪಿಸಿದ್ದು ಶನಿವಾರ ಮಧ್ಯಾಹ್ನ ಭಕ್ತಾದಿಸಾರ್ವಜನಿಕರಿಗೆ ಬೃಹತ್ ಅನ್ನ ಸಂತರ್ಪಣೆ ಕಾರ್ಯಕ್ರಮ ಏರಿ್ಡಸಲಾಗಿತ್ತು.
ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಅನ್ನ ಸಂತರೆ್ಣ ಮಾಡಿದರು. ಗೆಳೆಯರ ಬಳಗದ ಪದಾಧಿಕಾರಿಗಳು ಯುವಕರು ಒಳ್ಳೆಯ ವ್ಯವಸ್ಥೆಯನ್ನು ಮಾಡಿ ಅಚ್ಚುಕಟ್ಟಾದ ಕಾರ್ಯ ನಡಿಸಿ ಅನ್ನ ಸಂತರೆ್ಣ ವ್ಯವಸ್ಥೆ ಮಾಡಿದರು,,ಸಂಭ್ರಮದ ಗಣೇಶೋತ್ಸವ ಹಾಗೂ ಅನ್ನ ಸಂತರೆ್ಣ ಕಾರ್ಯದಲ್ಲಿ ತೊಡಗಿರುವ ಗೆಳೆಯರ ಬಳಗದ ಪದಾಧಿಕಾರಿಗಳು ಅನೇಕ ಜನ ಯುವಕರು ಕಾರ್ಯ ಕ್ರಮದ ಯಶಸ್ವಿಗೆ ಶ್ರಮಿಸಿದರು, ಯುವಕರ ಪರಿಶ್ರಮ ಮತ್ತು ಹಿರಿಯರ ಮಾರ್ಗದರ್ಶನ ದಲ್ಲಿ ಅನ್ನ ಸಂತರ್ಪಣೆ ಕಾರ್ಯ ಯಶಸ್ವಿಯಾಗಿ ಜರುಗಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತ ಸಮೂಹ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 