ನಾಳೆ ಸಂಗೊಳ್ಳಿ ರಾಯಣ್ಣ ಜಯಂತಿ: ಅದ್ದೂರಿ ಮೆರವಣಿಗೆ

ನಾಳೆ ಸಂಗೊಳ್ಳಿ ರಾಯಣ್ಣ ಜಯಂತಿ: ಅದ್ದೂರಿ ಮೆರವಣಿಗೆ Sangolli Rayanna Jayanti Tomorrow: Grand Procession

 

ಲಕ್ಷ್ಮೇಶ್ವರ, ಆ.28: ಪಟ್ಟಣದಲ್ಲಿ ನಾಳೆ, ಆ.29ರಂದು ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟ, ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಅವರ 230ನೇ ಜಯಂತ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು.  

ಗದಗ ಜಿಲ್ಲಾ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಲಕ್ಷ್ಮೇಶ್ವರ ತಾಲೂಕು ಘಟಕದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಶ್ರೀರಾಮನ ಭಾವಚಿತ್ರಗಳೊಂದಿಗೆ ಭವ್ಯ ಮೆರವಣಿಗೆ ನಡೆಯಲಿದೆ. ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಸಾಗಲಿದೆ.  

ಕಾರ್ಯಕ್ರಮದಲ್ಲಿ ಪಕ್ಷಾತೀತವಾಗಿ ಹಾಗೂ ಜಾತ್ಯತೀತವಾಗಿ ಎಲ್ಲ ಸಮುದಾಯಗಳ ಮುಖಂಡರು, ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಗದಗ ಜಿಲ್ಲಾ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಬಸವರಾಜ ಹಿರೇಮನಿ ಮನವಿ ಮಾಡಿದ್ದಾರೆ.  

ಈ ಕುರಿತು ಬಳಗದ ಉಪಾಧ್ಯಕ್ಷ ಸುರೇಶ ಹಟ್ಟಿ ಹಾಗೂ ಮುಖಂಡರಾದ ಬಸವರಾಜ ಕಲ್ಲೂರ, ನೂರ ಹಮೀದ್ ಮಾಕಂದರ್ ಸೇರಿದಂತೆ ಹಲವರು ಮಾಧ್ಯಮದ ಮೂಲಕ ಮಾಹಿತಿ ನೀಡಿದ್ದಾರೆ.