ವಿವಿಧ ಕ್ಷೇತ್ರದ ಸಾಧಕರಿಗೆ ಸಂಗೊಳ್ಳಿ ರಾಯಣ್ಣ ಸೇವಾರತ್ನ ಪ್ರಶಸ್ತಿ ಪ್ರದಾನ
Sangolli Rayanna Sevaratna award is presented to achievers in various fields
ಬೆಳಗಾವಿ 09: ಸಂಕೇಶ್ವರ ಪಟ್ಟಣದಲ್ಲಿ ಇತ್ತಿಚೇಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫೈವ್ ಸ್ಟಾರ್ ಅಸೋಶಿಯೇಷನ್ ಮತ್ತು ಕಲಾಕೌಸ್ತುಭ ಸಂಸ್ಥೆಯ ವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಮೀಪದ ನಿಡಸೋಸಿಯ ದುರದುಂಡಿಶ್ವರ ಮಠದ ಡಾ. ಶಿವಲಿಂಗೇಶ್ವರ ಶ್ರೀಗಳ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮವನ್ನು ಯರನಾಳದ ಬ್ರಹ್ಮಾನಂದ ಶ್ರೀಗಳು, ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಬಸವರಾಜ ಕಲ್ಲಟ್ಟಿ, ಹಿರಿಯ ಸಾಹಿತಿ ಡಾ. ಅಜನಾಳ ಭೀಮಾಶಂಕರ ಮತ್ತಿತರರು ಉದ್ಘಾಟಿಸಿದರು.
ಬೆಳಗಾವಿಯ ಪತ್ರಿಕಾ ಛಾಯಾಗ್ರಾಹಕ ಏಕನಾಥ ಅಗಸಿಮನಿ, ಖಾನಾಪುರದ ಪತ್ರಕರ್ತ ಪ್ರಸನ್ನ ಕುಲಕರ್ಣಿ, ಬೀಡಿ ಗ್ರಾಮದ ಯುವ ಉದ್ಯಮಿ ಶಿವಾ ಬಾಗವಾಡಕರ, ಗಡಿನಾಡು ಹಿತರಕ್ಷಣಾ ಸಮಿತಿ ಖಾನಾಪುರ ತಾಲೂಕು ಘಟಕದ ಅಧ್ಯಕ್ಷ ರಾಜು ಖಾತೇದಾರ, ಕುಂದಗೋಳದ ಕೃಷಿಕ ಹಾಗೂ ಸಾಮಾಜಿಕ ಕಾರ್ಯಕರ್ತ ಮಲ್ಲಿಕಾರ್ಜುನ ಸ್ವಾದಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಬೆಳಗಾವಿ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ 25 ಸಾಧಕರಿಗೆ ಶ್ರೀಗಳು ಹಾಗೂ ಗಣ್ಯರು ಪ್ರಮಾಣ ಪತ್ರ ನೀಡಿ ಗೌರವಿಸಿದರು.
ನಿಡಸೋಸಿ ಶ್ರೀಗಳು ಆಶೀರ್ವಚನ ನೀಡಿ, ಕಲೆ, ಸಾಹಿತ್ಯ, ಸಂಗೀತ, ನಾಡು-ನುಡಿಯ ಸೇವೆ, ಪತ್ರಿಕಾ ರಂಗ, ಸಾರ್ವಜನಿಕ ಸೇವೆ, ಕೃಷಿ, ಉದ್ಯಮ, ಚಿತ್ರಕಲೆ, ರಂಗಭೂಮಿ, ಮಹಿಳಾ ಸಬಲೀಕರಣ, ದಲಿತರ ಸಬಲೀಕರಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿ ಸಮಾಜಸೇವೆ ಮಾಡುತ್ತಿರುವ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಕಲಾಕೌಸ್ತುಭ ಸಂಸ್ಥೆ ಮತ್ತು ಫೈವ್ ಸ್ಟಾರ್ ಅಸೋಶಿಯೇಷನ್ ಸಂಘಟನೆಗಳು ಸೇರಿ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಶ್ಲಾಘಿಸಿದರು.
ಸಂಕೇಶ್ವರ ಪುರಸಭೆ ಅಧ್ಯಕ್ಷೆ ಸೀಮಾ ಹತನೂರಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಗಜಾನನ ಕಳ್ಳಿ, ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಜಯಗೌಡ ಪಾಟೀಲ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ರಾಯವ್ವಗೋಳ ಮತ್ತಿತರರು ಭಾಗವಹಿಸಿದ್ದರು. ಕಲಾ ಕೌಸ್ತುಭ ಸಂಸ್ಥೆಯ ಅಧ್ಯಕ್ಷ ಗೋವಿಂದ ಮೇಲಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಫೈವ್ ಸ್ಟಾರ್ ಅಸೊಸಿಯೇಷನ್ ಸಂಸ್ಥಾಪಕ ವೀರೇಂದ್ರ ಚೌಗಲಾ ವಂದಿಸಿದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 