ಮಲ್ಲಿಕಾರ್ಜುನ ಸಿದ್ನೆಕೊಪ್ಪಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ
Sangolli Rayanna award to Mallikarjuna Sidnekoppa
ಕೊಪ್ಪಳ 28 : ಇಲ್ಲಿನ ಗವಿಸಿದ್ಧೇಶ್ವರ ಬ್ಯಾಂಕ್ ವ್ಯವಸ್ಥಾಪಕ ಮಲ್ಲಿಕಾರ್ಜುನ ಸಿದ್ನೆಕೊಪ್ಪ ಅವರು ಕಳೆದ ಎರಡು ದಶಕಕ್ಕೂ ಅಧಿಕ ಕಾಲ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡುವ ಜೊತೆಗೆ ಗ್ರಾಹಕ ಸ್ನೇಹಿ ಬ್ಯಾಂಕ್ ಮಾಡುವಲ್ಲಿ ಶ್ರಮಿಸಿರುವದನ್ನು ಪರಿಗಣಿಸಿ ಸಂಗೊಳ್ಳಿ ರಾಯಣ್ಣ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಹಕಾರಿ ಕ್ಷೇತ್ರದ ಅಮೋಘ ಸೇವೆ ಜೊತೆಗೆ ಅವರು ತಮ್ಮ ಓಣಿಯ ಕಾರ್ಯಕ್ರಮಗಳು ಮತ್ತು ಬಸವೇಶ್ವರ ದೇವಸ್ಥಾನದ ಅಭಿವೃದ್ಧಿಯಲ್ಲಿ ಸಹ ಅಪಾರ ಸೇವೆ ಮಾಡಿದ್ದನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಜಿಲ್ಲಾ ಘಟಕದಿಂದ ಕೊಡಮಾಡುವ ಸಂಗೊಳ್ಳಿ ರಾಯಣ್ಣ ರಾಜ್ಯ ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರಲ್ಲಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಒಕ್ಕೂಟದ ಡಾ. ಎಸ್. ಬಾಲಾಜಿ, ಕವಲಗುಡ್ಡ ಹಣಮಾಪುರದ ಸಿದ್ಧ ಸಿದ್ಧಾಶ್ರಮದ ಪೂಜ್ಯ ಸಿದ್ಧಯೋಗಿ ಅಮರೇಶ್ವರ ಮಹಾರಾಜರು, ಸುಕ್ಷೇತ್ರ ಹುಲಜಂತಿ ಪಟ್ಟದ ಪೂಜ್ಯರಾದ ಮಾಳಿಂಗರಾಯ ಮಹಾರಾಜರು, ನೆಹರು ಯುವ ಕೇಂದ್ರದ ನಿವೃತ್ತ ಪ್ರಾದೇಶಿಕ ಅಧಿಕಾರಿ ಎಸ್. ಯು. ಜಮಾದಾರ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರ ಉಪಾಧ್ಯಕ್ಷ, ಯುವ ಒಕ್ಕೂಟದ ಕಲಬುರಗಿ ವಿಭಾಗೀಯ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ, ಸಂಗೊಳ್ಳಿ ರಾಯಣ್ಣ ಯುವ ಪಡೆ ಅಧ್ಯಕ್ಷ ಯಲ್ಲು ಬಮ್ಮನಹಳ್ಳಿ, ರಾಷ್ಟ್ರೀಯ ಪ್ರಶಸ್ತಿ ಪಡೆದ ಛಾಯಾಗ್ರಾಹಕ ಸತೀಶ ಮುರಾಳ, ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಸೇರಿದಂತೆ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 