ರತ್ನಾಪುರ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆ
Sangolli Rayanna statue inaugurated in Ratnapura village
ವಿಜಯಪುರ 16: ಕ್ರಾಂತೀವೀರ ಸಂಗೊಳ್ಳಿ ರಾಯಣ್ಣರ ದೇಶಪ್ರೇಮ, ಹೋರಾಟದ ಕಿಚ್ಚು ಸದಾ ಆದರ್ಶವಾಗಿವೆ ಎಂದು ಸಚಿವ ಎಂ. ಬಿ. ಪಾಟೀಲ ಹೇಳಿದರು.
ಶುಕ್ರವಾರ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆ ಮತ್ತು ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿಯ ಅಗಸನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನವರ 229ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸಂಗೊಳ್ಳಿ ರಾಯಣ್ಣ ನಾಡಿನ ಏಕತೆ ಮತ್ತು ಸ್ವಾಭಿಮಾನದ ಶಾಶ್ವತ ಸಂಕೇತ. ಕಿತ್ತೂರು ಸಂಸ್ಥಾನವನ್ನು ಕಾಪಾಡುವಲ್ಲಿ ಸಂಗೊಳ್ಳಿ ರಾಯಣ್ಣವರು ರಾಣಿ ಚೆನ್ನಮ್ಮನವರ ಹೆಗಲಿಗೆ ಹೆಗಲು ಕೊಟ್ಟು ಶ್ರಮಿಸಿದರು. ಅವರ ಶೌರ್ಯ ಮತ್ತು ದೇಶಭಕ್ತಿಯ ಸಂದೇಶಗಳು ಮುಂದಿನ ಪೀಳಿಗೆಗಳಿಗೆ ಪ್ರೇರಣೆ ಮತ್ತು ಆದರ್ಶವಾಗಿವೆ. ಅವರನ್ನು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸಲಾಗದು. ಅವರು ಎಲ್ಲರ ಹೃದಯದಲ್ಲೂ ನೆಲೆಸಿರುವ ನಾಡಿನ ವೀರಪುತ್ರರಾಗಿದ್ದಾರೆ. ರಾಯಣ್ಣನವರ ವ್ಯಕ್ತಿತ್ವ ಹಾಗೂ ಆದರ್ಶಗಳು ಎಲ್ಲಾ ಸಮುದಾಯಗಳಿಗೂ, ಎಲ್ಲ ಕಾಲಕ್ಕೂ ಮಾರ್ಗದರ್ಶಿಯಾಗಿದೆ ಎಂದು ಸಚಿವರು ಹೇಳಿದರು.
ರತ್ನಾಪುರ ಗ್ರಾಮದ ಕಾರ್ಯಕ್ರಮದಲ್ಲಿ ಮದಕೊಂಡ ಮಹಾರಾಜರು, ಹುಲಜಂತಿ ಮಾಳಿಂಗರಾಯರು, ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಮುಖಂಡರಾದ ಜಕ್ಕಪ್ಪ ಯಡವೆ, ಆರ್. ಜಿ. ಯರನಾಳ, ರಾಜು ಕಂಬೋಗಿ, ರವಿ ಬಿದರಿ, ಲೇಪು ಕೊಣ್ಣೂರ, ರಾಮಜಿ ಮೀಸಾಳ, ಈಶ್ವರ ದಳವಾಯಿ, ಚಂದ್ರಕಾಂತ ಒಡೆಯರ ಅಗಸನಹಳ್ಳಿ ಗ್ರಾಮದ ಕಾರ್ಯಕ್ರಮದಲ್ಲಿ ಮುಖಂಡರಾದ ರಾಮನಗೌಡ ಪಾಟೀಲ, ಪ್ರಕಾಶಗೌಡ ಪಾಟೀಲ, ಸೋಮು ಹಿರೇಕುರಬರ, ಮಲ್ಲು ಪರಸಣ್ಣವರ, ಅಲ್ಲಿಸಾಬ ಖಡಕೆ, ಪ್ರಕಾಶ ಹೂಗಾರಕರ, ಸುರೇಶ ಸೀತಿಮನಿ, ಬೀಮಶಿ ತಳೇವಾಡ, ಮಲ್ಲು ಹಿರೇಕುರಬರ, ಚಾಂದಸಾಬ ಇನಮದಾರ, ಮಾಳಪ್ಪ ಸಿದ್ನಾತ, ಶೇಖು ಲೆಂಕಪ್ಪಗೋಳ ಮಂತಾದವರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 