ಬೆಳಗಾವಿ 12: ಮಾಜಿ ಶಾಸಕ ಸಂಜಯ ಪಾಟೀಲ ಅವರನ್ನು ಗ್ರಾಮೀಣ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿ ಅವರು ಪಕ್ಷದ ಧ್ವಜವನ್ನು ಸಂಜಯ ಪಾಟೀಲ ಅವರಿಗೆ ಹಸ್ತಾಂತರ ಮಾಡಿದರು.
ಅದೇ ರೀತಿಯಾಗಿ ಬೆಳಗಾವಿ ಜಿಲ್ಲಾ ಗ್ರಾಮೀಣ ಜಿಲ್ಲಾಧ್ಯಕ್ಷರಾಗಿದ್ದ ಡಾ. ವಿಶ್ವನಾಥ್ ಪಾಟೀಲ್ರ ಅಧಿಕಾರವಧಿ ಪೂರ್ಣವಾದ ಹಿನ್ನಲೆ ನೂತನ ಜಿಲ್ಲಾಧ್ಯಕ್ಷರಾಗಿ ಸಂಜಯ್ ಪಾಟೀಲರನ್ನು ನೇಮಿಸಲಾಗಿದೆ. ಅಲ್ಲದೆ ಬೆಳಗಾವಿ ನಗರ ಘಟಕದ ಅಧ್ಯಕ್ಷರಾಗಿ ಮಹಾನಗರ ಅಧ್ಯಕ್ಷರಾಗಿ ಶಶಿಕಾಂತ ಪಾಟೀಲರನ್ನು ಹಾಗೂ ಚಿಕ್ಕೋಡಿ ಜಿಲ್ಲೆಯ ಅಧ್ಯಕ್ಷರಾಗಿ ಡಾ. ರಾಜೇಶ್ ನೇಲರ್ಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಸಚಿವರಾದ ಸಿ.ಟಿ.ರವಿ, ಬಿಜೆಪಿ ಮುಖಂಡರಾದ ಈರಣ್ಣ ಕಡಾಡಿ, ಎಂ.ಬಿ.ಜೀರಲಿ, ಧನಂಜಯ ಜಾಧವ್ ಸೇರಿದಂತೆ ಇನ್ನು ಅನೇಕರು ಉಪಸ್ಥಿತರಿದ್ದರು.