ಸಂತ ಕವಿ ಸರ್ವಜ್ಞ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಕೊಪ್ಪಳ 20: ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶ್ರೀ ಸಂತ ಕವಿ ಸರ್ವಜ್ಞ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಸಂತ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಾರೆ್ಪಣ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಡಿ.ನಾಗರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ನಗರಾಭಿವೃದ್ಧಿ ಪ್ರಾಧಿಕಾರದ ಕಮಿಷನರ್ ಯೋಗಾನಂದ, ನಗರ ಸಭೆ ಕಮಿಷನರ್ ಗಣಪತಿ ಪಾಟೀಲ್, ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರದ(ಎನ್.ಐ.ಸಿ) ಡಿ.ಐ.ಓ ಬಸವರಾಜ ವಾಳದ, ಕುಂಬಾರ ಸಮಾಜದ ಮುಖಂಡರಾದ ಕಳಕಪ್ಪ ಕುಂಬಾರ, ಅಂದಪ್ಪ ಕುಂಬಾರ, ಅಶೋಕ ಕುಂಬಾರ, ಮಲ್ಲಪ್ಪ ಕುಂಬಾರ, ಗವಿಸಿದ್ದಪ್ಪ ಬಸ್ಸಾಪೂರ, ನಿಂಗಪ್ಪ ಕುಂಬಾರ, ಬಸವರಾಜ ಕುಣಕೇರಿ, ಮಲ್ಲಪ್ಪ ಮುದ್ದಬಳ್ಳಿ, ಡಾ.ಅಮರೇಶ ಇಂದರಗಿ, ಸುರೇಶ ಕುಂಬಾರ, ಪ್ರಭು ಕುಂಬಾರ, ಅಯ್ಯಪ್ಪ ಕಾಮನೂರ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.