ಸಂತ ಸೇವಾಲಾಲ್ ಜಯಂತಿ ಪೂರ್ವ ಸಿದ್ದತಾ ಸಭೆ
Sant Sevalal Jayanti Pre-Preparatory Meeting
ಲೋಕದರ್ಶನ ವರದಿ
ಸಂತ ಸೇವಾಲಾಲ್ ಜಯಂತಿ ಪೂರ್ವ ಸಿದ್ದತಾ ಸಭೆ
ಗದಗ 04: ಸಂತ ಸೇವಾಲಾಲ್ ಜಯಂತಿಯನ್ನು ಫೆಬ್ರುವರಿ 17 ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬುಧವಾರ ಸಂತ ಸೇವಾಲಾಲ್ ಜಯಂತಿ ಕುರಿತು ಜರುಗಿದ ಪೂರ್ವ ಸಿದ್ದಾತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಮಟ್ಟದಲ್ಲಿ ಹಾಸ್ಟೇಲ್, ಶಾಲಾ, ಕಾಲೇಜು, ಗ್ರಾಮ ಪಂಚಾಯಿತಿಯಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕು. ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಸುವ ಕಾರ್ಯಕ್ರಮವಿದೆ. ಶಿಷ್ಠಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಸಂತ ಸೇವಾಲಾಲ್ ಜಯಂತಿ ಕುರಿತು ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ. ಸಂತ ಸೇವಾಲಾಲ್ ಜಯಂತಿಯನ್ನು ಬಹಳ ಅಚ್ಚುಕಟ್ಟಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ರವಿಕಾಂತ ಅಂಗಡಿ, ಚಂದ್ರಕಾಂತ ಚೌಹಾಣ, ಪಾಂಡು ಚೌಹಾಣ, ಎನ್.ವಿ.ರಾಠೋಡ, ಕೆ.ಸಿ.ನಬಾಪುರ, ಜಿ.ಡಿ.ನಾಯಕ, ರೂಪಸಿಂಗ್ ಪೂಜಾರ, ತಿಪ್ಪಣ್ಣ ಪವಾರ, ಸೇರಿದಂತೆ ಸಮಾಜದ ಹಿರಿಯರು, ಪ್ರಮುಖರು, ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸರ್ವರಿಗೂ ಸ್ವಾಗತಿಸಿ ವಂದಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 