ಧರ್ಮಯುದ್ಧ ಹೋರಾಟಕ್ಕೆ ಬೆಂಬಲಿಸಿ, ಸಂತೋಷ ಪಾಟೀಲ್
Santosh Patil supports the crusade
ಸಿಂದಗಿ 31: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ನಿರಂತರ ಅಪಪ್ರಚಾರ, ಹಿಂದುತ್ವದ ವಿರುದ್ಧ ನಡೆದಿರುವ ಷಡ್ಯಂತರ, ಎಡಪಂಥೀಯರ ಸಂಚು, ವಿರೋಧಿಸಿ ದಿನಾಂಕ 30/08/2025 ಶನಿವಾರ ಪಟ್ಟಣದ ಶ್ರೀಬಸವೇಶ್ವರ ವೃತ್ತದಲ್ಲಿ ಭಾರತೀಯ ಜನತಾ ಪಾರ್ಟಿ ಸಿಂದಗಿ ಮಂಡಲ ವತಿಯಿಂದ ಧರ್ಮಯುದ್ಧ ಹೋರಾಟ ಹಮ್ಮಿಕೊಳ್ಳಲಾಗಿದೆ ಈ ಹೋರಾಟಕ್ಕೆ ತಾವೆಲ್ಲರೂ ಬೆಂಬಲಿಸಬೇಕು ಎಂದು ಮಂಡಲ ತಾಲೂಕ ಅಧ್ಯಕ್ಷ ಸಂತೋಷ ಪಾಟೀಲ್ (ಡಂಬಳ) ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ತಿಳಿಸಿದ ಅವರು, ಹಿಂದೆ ಶಬರಿಮಲೆ ಅಯ್ಯಪ್ಪ ಸ್ವಾಮೀ ದೇವಸ್ಥಾನ, ತಿರುಪತಿ ತಿಮ್ಮಪ್ಪನ ದೇವಸ್ಥಾನ, ಇಂದು ಧರ್ಮಸ್ಥಳದ ಶ್ರೀ ಮಂಜುನಾಥ್ ಮತ್ತು ಅಣ್ಣಪ್ಪ ಸ್ವಾಮಿ ದೇವಸ್ಥಾನದ ವಿರುದ್ಧ ಇವರು ಮಾಡಿದ ಎಲ್ಲ ಪ್ರಯತ್ನಗಳು ವಿಫಲವಾಗಿವೆ ಹೀಗಾಗಿ ಧರ್ಮದ ಉಳಿವಿಗಾಗಿ ಧರ್ಮಯುದ್ದ ಮಾಡುವ ಅನಿವಾರ್ಯತೆ ಎದುರಾಗಿದೆ ಧರ್ಮದ ಉಳಿವಿಗಾಗಿ ಕೈಜೋಡಿಸಿ ನೈತಿಕ ಬೆಂಬಲ ಗೋಷಿಸೋಣ ಎಂದು ಮನವಿ ಮಾಡಿದ್ದಾರೆ.
ಗಣ್ಯರು ಭಾಗಿ: ಧರ್ಮಯುದ್ಧ ಹೋರಾಟದಲ್ಲಿ ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ, ಮಾಜಿ ಶಾಸಕ ರಮೇಶ ಭೂಸನೂರ, ಪರಿಷತ್ ಸದಸ್ಯ ಅರುಣ ಶಾಹಾಪುರ, ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಹೋರಾಟದಲ್ಲಿ ಸಿಂದಗಿ ಮಂಡಲದ ಎಲ್ಲಾ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಮೋರ್ಚಾ ಪದಾಧಿಕಾರಿಗಳು, ಶಕ್ತಿ ಕೇಂದ್ರದ ಪ್ರಮುಖರು, ಮಾಜಿ ಜಿಲ್ಲಾ ಪಂಚಾಯತ ಸದಸ್ಯರು, ಮಾಜಿ ತಾಲ್ಲೂಕ ಪಂಚಾಯತ ಸದಸ್ಯರು, ಪುರಸಭೆ ಸದಸ್ಯರು,ಗ್ರಾಮ ಪಂಚಾಯತ ಸದಸ್ಯರು, ಗ್ರಾಮೀಣ ಭಾಗದ ಪಕ್ಷದ ಮುಖಂಡರು, ಕಾರ್ಯಕರ್ತರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಭಕ್ತರು, ಪಾಲ್ಗೊಳ್ಳಬೇಕು ಎಂದು ಮಂಡಲ ಪ್ರಧಾನ ಕಾರ್ಯದರ್ಶಿ ಗುರು ತಳವಾರ, ಸಿದ್ರಾಮ ಆನಗೊಂಡ ಕರೆ ನೀಡಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 