ಪೌರಕಾರ್ಮಿಕರೊಂದಿಗೆ ಸಪಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು ಸಂವಾದ
Sapai Karmachari Commission Chairman P. Raghu interacts with civil servants
ಹಾವೇರಿ 06 : ಪೌರಕಾರ್ಮಿಕರ ಮಕ್ಕಳು ಕಾರ್ಮಿಕರಾಗಬಾರದು ಅವರು ಕೂಡ ಮುಂದೆ ದೊಡ್ಡ ದೊಡ್ಡ ಅಧಿಕಾರಿಗಳಾಗಬೇಕು ಎಂದು ಕರ್ನಾಟಕ ರಾಜ್ಯ ಸಪಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು ಅವರು ಹೇಳಿದರು.
ನಗರದ ಜಿಲ್ಲಾ ಗುರುಭವನದಲ್ಲಿ ಮಂಗಳವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ನಗರಸಭೆ ಸಹಯೋಗದಲ್ಲಿ ಆಯೋಜಿಸಲಾದ ಪೌರಕಾರ್ಮಿಕರು ಮತ್ತು ಇತರೆ ಸ್ಥಳೀಯ ಕಾರ್ಮಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಬೇಕು ಹಾಗೂ ಅವರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ರಾಜ್ಯ ಸಪಾಯಿ ಕರ್ಮಚಾರಿ ಆಯೋಗದ ಸಂಶೋಧನಾಧಿಕಾರಿ ಮಹದೇವಸ್ವಾಮಿ ಮಾತನಾಡಿ, ಕಾರ್ಮಿಕರಿಗೆ ಉಚಿತ ಚಿಕಿತ್ಸಾ ವ್ಯವಸ್ಥೆ ಮತ್ತು ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು .
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಚಂದ್ರ್ಪ ಸಿ. ಅವರು, ಪೌರ ಕಾರ್ಮಿಕರ ಕಾಯಂ ನೇಮಕಾತಿ ಮಾರ್ಗ ಸೂಚಿ, ಕಾರ್ಮಿಕರ ಸುರಕ್ಷತಾ ಪರಿಕರಗಳು, ಕಾರ್ಮಿಕರ ಮಕ್ಕಳಿಗೆ ಮೊರಾರ್ಜಿ ಸೇರಿದಂತೆ ವಿವಿಧ ವಸತಿ ಶಾಲೆಗಳ ಆಯ್ಕೆ ಕುರಿತು ಮಾಹಿತಿ ನೀಡಿದರು.
ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಸುಭಾಸ ಬೆಂಗಳೂರ ಮಾತನಾಡಿ, ಪ್ರತಿ ಕಾರ್ಮಿಕರಿಗೂ ಪ್ರತಿ ತಿಂಗಳ 5ನೇ ತಾರೀಖಿನೊಳಗೆ ವೇತನ ಪಾವತಿಸಬೇಕು, ಪೌರಕಾರ್ಮಿಕರಿಗೆ ಸಫಾಯಿ ದೃಢೀಕರಣ ಪತ್ರ ನೀಡಬೇಕು ಮತ್ತು ಪ್ರತಿ 500 ಜನಕ್ಕೆ ಒಬ್ಬರಂತೆ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಬೇಕು. ಪೌರಕಾರ್ಮಿಕರಿಗೆ ಪ್ರತ್ಯೇಕ ಕಾಲೋನಿಗಳನ್ನು ಮಾಡಿಕೊಡಬೇಕೆಂದು ಆಯೋಗದ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.
ಈ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪ್ರಶಾಂತ ವರಗಪ್ಪನವರ, ನಗರ ಸಭೆ ಪೌರಾಯುಕ್ತ ಕಾಂತರಾಜು, ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರು ಭೀಮಣ್ಣ ಯಲ್ಲಪ್ಪನವರ. ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು. ಪುರಸಭೆ ಮತ್ತು ಪಂಚಾಯಿತಿಯ ಮುಖ್ಯ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 