ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನೆನೆಪಿನಲ್ಲಿ ಸಸಿ
Sapling in memory of the tree mother, Saalumarada Thimmakka
ಹುಬ್ಬಳ್ಳಿ 17: ಈಚೆಗೆ ಹುಬ್ಬಳ್ಳಿಯ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹುಬ್ಬಳ್ಳಿ ಮತ್ತು ಅರಣ್ಯ ಇಲಾಖೆ ಹುಬ್ಬಳ್ಳಿ ಇವುಗಳ ಸಂಯುಕ್ತಾಶ್ರಯದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನೆನಪಿಗಾಗಿ ಸಸಿಗಳನ್ನು ನೆಡಲಾಯಿತು. ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರಾದ ಯಮನಪ್ಪ ಕೆ., ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ದಿವಾಣಿ ನ್ಯಾಯಾಧೀಶರಾದ ವಿಶ್ವನಾಥ ಯಮಕನಮರಡಿ, ವಲಯ ಅರಣ್ಯ ಅಧಿಕಾರಿ ಆರ್.ಎಸ್. ಉಪ್ಪಾರ ಅವರು ಸಾಲು ಮರದ ತಿಮ್ಮಕ್ಕನ್ನವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವಕೀಲರು, ನ್ಯಾಯಾಲಯದ ಸಿಬ್ಬಂದಿ, ಅರಣ್ಯ ಇಲಾಖೆಯ ಸಿಬ್ಬಂದಿ ಇನ್ನಿತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 