ಕನ್ನಡ ಕೀರ್ತಿ ಪಸರಿಸಿದ ಸಾಧಕಿಯರು ಸರಸ್ವತಿ ಹುಲ್ಲಣ್ಣವರ

ಕನ್ನಡ ಕೀರ್ತಿ ಪಸರಿಸಿದ ಸಾಧಕಿಯರು ಸರಸ್ವತಿ ಹುಲ್ಲಣ್ಣವರ  Saraswati Hullannavara, the women who spread Kannada fame

ಲಕ್ಷ್ಮೇಶ್ವರ " 23 ; ಕನ್ನಡ ನಾಡು ಕಲೆ, ಸಾಹಿತ್ಯ, ಶಿಕ್ಷಣ, ಸಮಾಜಸೇವೆ, ವಿಜ್ಞಾನ, ರಾಜಕೀಯ, ಕ್ರೀಡೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ ಮಹಿಳೆಯರನ್ನು ಕಂಡಿದೆ. ತಮ್ಮ ಪ್ರತಿಭೆ, ಪರಿಶ್ರಮ, ತ್ಯಾಗ ಮತ್ತು ಸಮಾಜಮುಖಿ ಚಿಂತನೆಯ ಮೂಲಕ ಇವರು ಕನ್ನಡದ ಕೀರ್ತಿಯನ್ನು ದೇಶ-ವಿದೇಶಗಳಲ್ಲಿ ಪಸರಿಸಿದ್ದಾರೆ. ಇಂತಹ ಅನನ್ಯ ಸಾಧಕಿಯರು ಇಂದಿನ ಪೀಳಿಗೆಗೆ ಸ್ಪೂರ್ತಿಯ ಸೆಲೆಯಾಗಿದ್ದಾರೆ.

ಎಂದು ಪಟ್ಟಣದ ಶ್ರೀ ಜಗದ್ಗುರು ವೀರಗಂಗಾಧರ ಮಹಿಳಾ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಸರಸ್ವತಿ ಹುಲ್ಲಣ್ಣವರ ಅಭಿಪ್ರಾಯ ಪಟ್ಟರು. ಇಲ್ಲಿಯ ರಾಜರಾಜೇಶ್ವರಿ ಮಹಿಳಾ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಜರುಗಿದ ಕನ್ನಡ ನಾಡಿನ ಅನನ್ಯ ಸಾಧಕೀಯರು ಉಪನ್ಯಾಸ ಕಾರ್ಯಕ್ರಮದ ಉಪನ್ಯಾಸಕರಾಗಿ ಮಾತನಾಡುತ್ತಾ ಕವಿತಾ ಮಿಶ್ರಾ ಅವರು ಕರ್ನಾಟಕದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ನಿವಾಸಿಯಾಗಿದ್ದು, ಸಾಫ್ಟ್ವೇರ್ ಇಂಜಿನಿಯರಿಂಗ್ ಹಿನ್ನೆಲೆಯಿಂದ ಬಂದು ಖ್ಯಾತ ಕೃಷಿ ಉದ್ಯಮಿಯಾಗಿ ಹೊರಹೊಮ್ಮಿದ್ದಾರೆ.

ಕಲ್ಲುಬಂಡೆ ಮತ್ತು ಬಂಜರು ಭೂಮಿಯನ್ನು ಹನಿ ನೀರಾವರಿ ಹಾಗೂ ಸಾವಯವ ಕೃಷಿಯ ಮೂಲಕ ಯಶಸ್ವಿ ತೋಟವಾಗಿ ಪರಿವರ್ತಿಸಿದ್ದಾರೆ.ಆಡಳಿತ ಸೇವೆಯಲ್ಲಿ ರೂಪಾ ಡಿ, ಬೂಕರ್ ಪ್ರಶಸ್ತಿ ಪಡೆದ ಬಾನು ಮುಷತಾಕ್, ಸಾಹಿತ್ಯ ಮತ್ತು ಸಮಾಜ ಸೇವೆಯಲ್ಲಿ ಸುಧಾ ಮೂರ್ತಿ, ಪರಿಸರ ಕಾಳಜಿಯಲ್ಲಿ ಸಾಲುಮರದ ತಿಮ್ಮಕ್ಕ ಮತ್ತು ತುಳಸಿ ಗೌಡ ಸೇರಿದಂತೆ ಅನೇಕ ಕನ್ನಡ ನಾಡಿನ ಮಹಿಳೆಯರು ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಮುಖ್ಯೋಪಾಧ್ಯಾಯನಿ ಶಕುಂತಲಾ ಅಳಗವಾಡಿ ಮಾತನಾಡುತ್ತಾ ರಾಜಕೀಯ ಮತ್ತು ಆಡಳಿತ ಕ್ಷೇತ್ರದಲ್ಲಿಯೂ ಕನ್ನಡ ನಾಡಿನ ಮಹಿಳೆಯರು ತಮ್ಮ ಛಾಪು ಮೂಡಿಸಿದ್ದಾರೆ.

ಜನಸೇವೆ, ನಾಯಕತ್ವ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಅವರು ಸಮಾಜಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಶಿಕ್ಷಣ, ವೈದ್ಯಕೀಯ, ವಿಜ್ಞಾನ, ಸಂಗೀತ, ನೃತ್ಯ, ಕ್ರೀಡೆ ರಂಗಭೂಮಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ ಎಂದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಂಚನಮಾಲಾ ಹಸರೆಡ್ಡಿ,ಅರುಂಧತಿ ಬಿಂಕದಕಟ್ಟಿ,ನಿವೃತ್ತ ಶಿಕ್ಷಕಿ ಸುವರ್ಣ ಹಿರೇಮಠ ಶತಶತಮಾನದಿಂದ ಅನೇಕ ಕನ್ನಡತಿಯರ ಸಾಧನೆಯನ್ನು ಸ್ಮರಿಸಿದರು.

ವೇದಿಕೆಯ ಅಧ್ಯಕ್ಷೆ ಹಿರಿಯ ಮಹಿಳಾ ಸಾಹಿತಿ ಲಲಿತಾ ಕೆರಿಮನಿ ಕಾರ್ಯದರ್ಶಿಗಳಾದ ನಿರ್ಮಲಾ ಅರಳಿ,ದೇವಕ್ಕ ಪಾಟೀಲ್ ಕೋಶಾಧ್ಯಕ್ಷರಾದ ರತ್ನಾಕರ್ಕಿ, ನೀಲಕ್ಕ ಬೂದಿಹಾಳ, ಸಾವಿತ್ರಿಬಾಯಿ ಗುಡಗೇರಿ, ಮಹಾನಂದ ಕೊಣ್ಣೂರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು ಗಾಯಿತ್ರಿ ಅಂಗಡಿ, ಪಾರ್ವತಿ ಕಳ್ಳಿಮಠ, ನಂದಿನಿ ಮಾಳವಾಡ, ಚಿತ್ರಾ ಯಾಳಗಿ ನಾಗರತ್ನ ಬುರುಡಿ ಕಾರ್ಯಕ್ರಮ ನಿರ್ವಹಿಸಿದರು.