ಆಧುನಿಕ ಕೃಷಿಯಲ್ಲಿ ಯಶಸ್ಸು ಕಂಡ ಯುವ ರೈತ ಮಹಿಳೆ ಸರಸ್ವತಿ ಲಮಾಣಿ
Saraswati Lamani, a young woman farmer who has achieved success in modern agriculture
ಲಕ್ಷ್ಮೇಶ್ವರ 07: ಇಂದಿನ ಆಧುನಿಕ ಯುಗದಲ್ಲಿ ಯುವಜನತೆ ಕೃಷಿಯಿಂದ ದೂರ ಸರಿದು ನಗರ ಜೀವನದತ್ತ ಮುಖ ಮಾಡುತ್ತಿರುವ ಸಂದರ್ಭದಲ್ಲಿ ತಾಲೂಕಿನ ಆದರಹಳ್ಳಿ ಗ್ರಾಮದ ಯುವ ರೈತ ಮಹಿಳೆ ಕುಮಾರಿ ಸರಸ್ವತಿ ಮಾರುತಿ ಲಮಾಣಿ ಕೃಷಿಯನ್ನೇ ವೃತ್ತಿಯಾಗಿಸಿಕೊಂಡು ಯಶಸ್ಸು ಸಾಧಿಸಿ ಇತರರಿಗೆ ಮಾದರಿಯಾಗಿದ್ದಾರೆ.
ಸಾಂಪ್ರದಾಯಿಕ ಕೃಷಿಯೊಂದಿಗೆ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು, ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಿರುವ ಅವರು ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿ ರೂಪಿಸಿದ್ದಾರೆ.
ಕೃಷಿ ಕ್ಷೇತ್ರಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಹಲವು ಸವಾಲುಗಳನ್ನು ಎದುರಿಸಿದರೂ, ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಅವುಗಳನ್ನು ಮೆಟ್ಟಿ ನಿಂತಿದ್ದಾರೆ. ಬೆಳೆ ವೈವಿಧ್ಯತೆ, ತೋಟಗಾರಿಕೆ, ಪಶುಸಂಗೋಪನೆ ಹಾಗೂ ಧಾನ್ಯ ಬೆಳೆಗಳನ್ನು ಸಮನ್ವಯಗೊಳಿಸಿದ ಸಮಗ್ರ ಕೃಷಿ ಪದ್ಧತಿಯ ಮೂಲಕ ವರ್ಷಪೂರ್ತಿ ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸರಸ್ವತಿ ಲಮಾಣಿ ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಿ ಸಾವಯವ ಗೊಬ್ಬರಗಳ ಮೂಲಕ ಮಣ್ಣಿನ ಫಲವತ್ತತೆಯನ್ನು ಕಾಪಾಡುತ್ತಿದ್ದಾರೆ. ಜೊತೆಗೆ ಹನಿ ನೀರಾವರಿ ತಂತ್ರಜ್ಞಾನ ಅಳವಡಿಸಿಕೊಂಡು ಕಡಿಮೆ ನೀರಿನಲ್ಲಿ ಹೆಚ್ಚು ಉತ್ಪಾದನೆ ಪಡೆಯುವ ಮೂಲಕ ಜಲ ಸಂರಕ್ಷಣೆಯಲ್ಲಿಯೂ ಮಾದರಿಯಾಗಿದ್ದಾರೆ.
"ಕೃಷಿ ಎಂದರೆ ಕೇವಲ ಕಷ್ಟಪಡುವ ಕೆಲಸವಲ್ಲ, ಅದು ಗೌರವಯುತ ಉದ್ಯಮ. ಮಣ್ಣನ್ನು ನಂಬಿ ಪ್ರಾಮಾಣಿಕವಾಗಿ ದುಡಿದರೆ ಕೃಷಿಯಲ್ಲೂ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು. ಮಹಿಳೆಯರು ಮನಸ್ಸು ಮಾಡಿದರೆ ಕೃಷಿ ಕ್ಷೇತ್ರದಲ್ಲಿಯೂ ದೊಡ್ಡ ಸಾಧನೆ ಮಾಡಬಹುದು" ಎಂದು ಸರಸ್ವತಿ ಲಮಾಣಿ ತಿಳಿಸಿದ್ದಾರೆ.
ಅವರ ಸಾಧನೆಯನ್ನು ಗುರುತಿಸಿ ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ಕೃಷಿ ಇಲಾಖೆ ಈಗಾಗಲೇ ಗೌರವಿಸಿವೆ. ಇನ್ನಷ್ಟು ಯುವತಿಯರು ಕೃಷಿಯತ್ತ ಆಸಕ್ತಿ ತೋರಲು ಸರಸ್ವತಿ ಲಮಾಣಿ ಅವರ ಸಾಧನೆ ಪ್ರೇರಣೆಯಾಗಲಿ ಎಂಬುದು ಗ್ರಾಮಸ್ಥರ ಆಶಯವಾಗಿದೆ.
ಇತ್ತೀಚೆಗೆ ಕೃಷಿ ಇಲಾಖೆಯ ಆತ್ಮ ಯೋಜನೆಯ ಎನ್.ಎಸ್. ಪೂಜಾರ ಹಾಗೂ ದೇವರಾಜ ಆಚಲಕರ ಅವರು ಸರಸ್ವತಿ ಲಮಾಣಿ ಅವರ ಕೃಷಿ ಚಟುವಟಿಕೆಗಳಿಗೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಕೃಷಿ ಇಲಾಖೆಯಿಂದ ದೊರೆಯುವ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 