‘ಭಾರತದ ಏಕೀಕರಣಕ್ಕೆ ಸರ್ದಾರ ವಲ್ಲಭಾಯಿ ಪಟೇಲ್ ಕೊಡುಗೆ ಅಪಾರ’
Sardar Vallabhbhai Patel's contribution to the unification of India was immense
ಬೀಳಗಿ 31: ಭಾರತದ ಏಕೀಕರಣಕ್ಕೆ ಸರ್ದಾರ ವಲ್ಲಭಾಯಿ ಪಟೇಲ್ ಅವರ ಕೊಡುಗೆ ಅಪಾರ. ಸ್ವತಂತ್ರ ಭಾರತದ ಮೊದಲ ಉಪ ಪ್ರಧಾನಮಂತ್ರಿಯಾಗಿ ಹಾಗೂ ಗೃಹ ಮಂತ್ರಿಯಾಗಿ ಭಾರತದ ಬಲಿಷ್ಠ ತೆಗೆ ತಮ್ಮ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಭಾರತದ ಏಕೀಕರಣ ಗೊಳಿಸಲು ಸರ್ದಾರ್ ವಲ್ಲಭಾಯಿ ಪಟೇಲರ ಕೊಡುಗೆ ಅಪಾರ ಎಂದು ಬೀಳಗಿ ಮಂಡಲ ಬಿಜೆಪಿ ಅಧ್ಯಕ್ಷ ಹೊಳಬಸು ಬಾಳಶೆಟ್ಟಿ ಅವರು ಹೇಳಿದರು.
ಬೀಳಗಿ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸರ್ದಾರ್ ವಲ್ಲಭಾಯಿ ಪಟೇಲರ ಜನ್ಮ ದಿನದ ನಿಮಿತ್ಯವಾಗಿ ರಾಷ್ಟ್ರೀಯ ಏಕತಾ ದಿನವನ್ನು ಹಮ್ಮಿಕೊಂಡಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸಭೆಯಲ್ಲಿ ಉಪಸ್ಥಿತರಿರುವ ಬೀಳಗಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಮುತ್ತು ಬೋರ್ಜಿ, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ತಿಪ್ಪಣ್ಣ ಸಂಜೀವಪ್ಪಗೊಳ್, ಮಂಡಲದ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಲಕ್ಷ್ಮಣ್ ಬಿಂಗಿ, ಪಕ್ಷದ ಮುಖಂಡರಾದ ಮಲ್ಲು ಕೋಮಾರ ದೇಸಾಯಿ, ನಿಂಗಪ್ಪ ದಂದರಗಿ, ಪಟ್ಟಣ ಪಂಚಾಯಿತಿ ಸದಸ್ಯ ಹುಚ್ಚಪ್ಪ ಕೌಲಗಿ, ವಿಠ್ಠಲ ಗಡ್ಡದ, ಈರಣ್ಣ ತೋಟದ ಲಕ್ಷ್ಮಣ್ ಡವಳೇಶ್ವರ, ಹನುಮಂತ ದಳವಾಯಿ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 