‘ಅಯೋಗ್ಯ 2'ಗಾಗಿ ಮತ್ತೆ ಒಂದಾದ ಸತೀಶ್ ನಿನಾಸಂ, ರಚಿತಾ ರಾಮ್‌

Satish Ninasam, Rachita Ram reunited for Aayogya 2

ಡಿಸೆಂಬರ್ 11ರಿಂದ ಚಿತ್ರೀಕರಣ ಆರಂಭ   

ಸ್ಯಾಂಡಲ್‌ವುಡ್‌ನ ಸೂಪರ್ ಸಕ್ಸಸ್ ಜೋಡಿಗಳಲ್ಲಿ ಒಂದಾಗಿರುವ ರಚಿತಾ ರಾಮ್ ಹಾಗೂ ಸತೀಶ್ ನಿನಾಸಂ ಮತ್ತೆ ಒಂದಾಗಿದ್ದಾರೆ. ‘ಅಯೋಗ್ಯ’ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಇದೀಗ 6 ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದೆ. ಹೌದು ‘ಅಯೋಗ್ಯ’ ಸಿನಿಮಾದ ಪಾರ್ಟ್‌ 2 ಸೆಟ್ಟೇರುತ್ತಿದ್ದು ಈಗಾಲೇ ಮುಹೂರ್ತಕ್ಕೆ ಡೇಟ್ ಕೂಡ ಫಿಕ್ಸ್‌ ಆಗಿದೆ. 6 ವರ್ಷದ ಹಿಂದೆ ಸಿದ್ದೇಗೌಡ ಹಾಗೂ ನಂದಿನಿ ಲವ್ ಸ್ಟೋರಿಗೆ ಕನ್ನಡ ಸಿನಿಮಾ ಪ್ರೇಮಿಗಳು ಶಹಬ್ಬಾಸ್ ಎಂದಿದ್ದರು. ಈಗ ಮತ್ತದೇ ತಂಡ 'ಅಯೋಗ್ಯ 2' ಸಿನಿಮಾ ಮೂಲಕ ಒಂದಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.  

‘ಅಯೋಗ್ಯ’ ಸಿನಿಮಾದ ಹಾಡುಗಳು ಕನ್ನಡ ಸಿನಿಮಾರಂಗದಲ್ಲಿಯೇ ಹೊಸ ಇತಿಹಾಸ ಬರೆದಿತ್ತು. ಈಗ ಮತ್ತಷ್ಟು ನೀರೀಕ್ಷೆಗಳೊಂದಿಗೆ ಚಿತ್ರತಂಡ ಹೊಸ ದಾಖಲೆ ಸೃಷ್ಟಿಸಲು ಸಜ್ಜಾಗಿದೆ. ಇನ್ನು ‘ಅಯೋಗ್ಯ 2’ ಸಿನಿಮಾ ಡಿಸೆಂಬರ್ 11 ರಂದು ಸೆಟ್ಟೇರಲಿದ್ದು ಮಹೇಶ್ ಕುಮಾರ್ ಆ್ಯಕ್ಷನ್‌-ಕಟ್ ಹೇಳುತ್ತಿದ್ದಾರೆ. ಎಂ ಮುನೇಗೌಡ ಅಯೋಗ್ಯ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಇರಲಿದೆ. ರಚಿತಾ ರಾಮ್, ಸತೀಶ್ ನಿನಾಸಂ, ರವಿಶಂಕರ್, ಶಿವರಾಜ್ ಕೆ.ಆರ್‌. ಪೇಟೆ ಸೇರಿದಂತೆ ‘ಅಯೋಗ್ಯ’ ಸಿನಿಮಾದಲ್ಲಿ ಅಭಿನಯಿಸಿದ ಬಹುತೇಕ ಕಲಾವಿದರು ‘ಅಯೋಗ್ಯ 2’ನಲ್ಲಿ ಮುಂದುವರೆಯುತ್ತಿರುವುದು ವಿಶೇಷ. ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್ ಅಂದರೆ ನೀರೀಕ್ಷೆ ಮತ್ತು ಕುತೂಹಲ ಕೊಂಚ ಜಾಸ್ತಿನೆ ಇರಲಿದೆ. ಹಾಗಾಗಿ ಅಯೋಗ್ಯ-2 ಕೂಡ ಸೆಟ್ಟೇರುವುದಕ್ಕೂ ಮೊದಲೇ ನೀರೀಕ್ಷೆ ದುಪ್ಪಟ್ಟು ಮಾಡಿದೆ. ಪಾರ್ಟ್‌-2 ಹೇಗಿರಲಿದೆ ರವಿ ಶಂಕರ್ ಮತ್ತು ಸತೀಶ್ ನಡುವಿನ ಕಾದಾಟ, ಜಿದ್ದಾಜಿದ್ದಿ ಹಾಗೆ ಮುಂದುವರೆಯಲಿದಿಯಾ ಕಾದುನೋಡಬೇಕು.