ಬೆಂಗಳೂರು, ಜ 17 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಹನ್ನೆರಡು ಸ್ಥಾಯಿ ಸಮಿತಿಯ ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆಯಲಿದೆ.
ಪಾಲಿಕೆ ಕೇಂದ್ರ ಕಛೇರಿ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಚುನಾವಣೆ ನಡೆಯಲಿದ್ದು, ಬೆಳಗ್ಗೆ 8.00 ರಿಂದ 9.30 ರವರೆಗೆ ನಾಮಪತ್ರವನ್ನು ಸ್ವೀಕರಿಸಲಾಗುತ್ತದೆ. ನಂತರ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಡಾ. ಎನ್.ವಿ.ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ 11.30 ಗಂಟೆಗೆ ಚುನಾವಣೆ ನಡೆಯಲಿದೆ.
ಇಲ್ಲಿಯವರೆಗೆ ಮೂರು ಬಾರಿ ಸ್ಥಾಯಿ ಸಮಿತಿಗಳ ಚುನಾವಣೆಗೆ ನಿಗದಿಪಡಿಸಿದ್ದರೂ, ಸದಸ್ಯರು ಸಭೆಗೆ ಗೈರಾದ್ದರಿಂದ ಚುನಾವಣೆ ಮುಂದೂಡಲ್ಪಟ್ಟಿತ್ತು.
ಆದರೆ, ಈ ಬಾರಿ ಈಗಾಗಲೇ ವಿಪಕ್ಷ ನಾಯಕ ಅಬ್ದುಲ್ ವಾಜಿದ್ ಅವರು ಚುನಾವಣೆಗೆ ಕಾಂಗ್ರೆಸ್ ಸದಸ್ಯರು ಹಾಜರಾಗುವ ಭರವಸೆ ನೀಡಿದ್ದು, ಚುನಾವಣೆ ನಡೆಯುವ ಕೊಂಚ ಭರವಸೆ ಮೂಡಿದೆಯೆನ್ನಬಹುದು.