ಸೌದಿ ಅರೇಬಿಯಾ ಬಸ್ ದುರಂತ
Saudi Arabia bus accident
ಹುಬ್ಬಳ್ಳಿ ಸೌದಿ ಅರೇಬಿಯಾದ ಮುಫ್ರಿಹತ್ ಬಳಿ ಸೋಮವಾರ ಮುಂಜಾನೆ ಸಂಭವಿಸಿದ ಬಸ್ ದುರಂತದಲ್ಲಿ ಹುಬ್ಬಳ್ಳಿಯ ಗಣೇಶ ಪೇಟೆ ನಿವಾಸಿ ಅಬ್ದುಲ್ ಘಣಿ ಶಿರಹಟ್ಟಿ (55) ಮೃತಪಟ್ಟಿದ್ದಾರೆ. ಅವರ ಕುಟುಂಬಸ್ಥರಿಗೆ ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರು ಇಂದು ಸಾಂತ್ವನ ತಿಳಿಸಿದರು. ಮಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಉಮ್ರಾ ಯಾತ್ರಿಕರಿದ್ದ ಬಸ್ ಸೌದಿ ಅರೇಬಿಯಾದ ಮುಫ್ರಿಹತ್ ಬಳಿ ಸೋಮವಾರ ಮುಂಜಾನೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸುಮಾರು 45 ಮಂದಿ ಭಾರತೀಯ ಯಾತ್ರಿಕರು ಮೃತಪಟ್ಟಿದ್ದಾರೆ. ಅವರಲ್ಲಿ ಹುಬ್ಬಳ್ಳಿಯ ಅಬ್ದುಲ್ ಘನಿ ಶಿರಹಟ್ಟಿ ಅವರು ಕೂಡ ಸೇರಿದ್ದಾರೆ. ಅವರ ಸಾವಿನ ದುಃಖ ಭರಿಸುವ ಶಕ್ತಿಯನ್ನು ಕುಟುಂಬಸ್ಥರಿಗೆ ದೇವರು ನೀಡಲಿ ಎಂದು ಅವರು ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಈ ಸಂದರ್ಭ ಮುಖಂಡರು, ಅಧಿಕಾರಿಗಳು, ಕುಟುಂಬಸ್ಥರು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 