ರಾಜ್ಯಕ್ಕೆ ತೃತೀಯ ಸ್ಥಾನ ಪಡೆದ ಸೌಪರ್ಣಿಕಾಗೆ ಸನ್ಮಾನ
Sauparnika, who secured third place in the state, was felicitated
ತಾಳಿಕೋಟಿ 30: ತಾಲೂಕಿನ ಬೇಲೂರ ಕ್ರಾಸ್ ಕೊಡಗಾನೂರದ ಜೆಎಸ್ ಎಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಸೌಪರ್ಣಿಕಾ ಸಂಗನಗೌಡ ಪಾಟೀಲ 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಏಪ್ರಿಲ್ 27ರಂದು ಶಾಲೆಯಲ್ಲಿ ಹಮ್ಮಿಕೊಂಡ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರಿಗೆ ಈ ಗೌರವ ಸಮರೆ್ಣ ಸಲ್ಲಿಸಲಾಯಿತು. ನಾವದಗಿ ಬ್ರಹನ್ಮಠದ ಷ.ಬ್ರ.ಶ್ರೀ ರಾಜ ಗುರು ರಾಜೇಂದ್ರ ಒಡೆಯರ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು.
ಈ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಸಿದ್ದನಗೌಡ ಗಬಸಾವಳಗಿ, ಕಾರ್ಯದರ್ಶಿ ಸಾಹೇಬಗೌಡ ಎಸ್.ಗಬಸಾವಳಗಿ, ಸಿ.ಆರಿ್ಸ. ಸಂಗಮೇಶ ಪಾಲ್ಕಿ, ಆಂಗ್ಲ ಮಾಧ್ಯಮ ವಿಭಾಗದ ಮುಖ್ಯ ಗುರುಮಾತೆ ವಿಜಯಲಕ್ಷ್ಮಿ ಎಸ್ ಗಬಸಾವಳಗಿ, ಕನ್ನಡ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯ ವಿನಾಯಕ ಪಟಗಾರ, ಗಣ್ಯರಾದ ಪ್ರಕಾಶ ನಾಯಕ್, ಮಾದೇವ ತಳವಾರ, ರೇವಣಸಿದ್ದಪ್ಪ ಗುಗ್ರಿ, ಸಂಗನಗೌಡ ಪಾಟೀಲ, ಶಿಕ್ಷಕರಾದ ಸಲೀಮ ಮನಿಯಾರ, ಹಣಮಂತ ಮೇಟಿ,ಸಾಬಣ್ಣ ಸರ್, ಮುತ್ತುರಾಜ ಯಡ್ರಾಮಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 