42 ಲಕ್ಷ ಪರಿಹಾರ ನೀಡಿದ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ

ಗಾಂಧಿನಗರ (ಗುಜರಾತ್), ಮಾ 27 ಕೋವಿಡ್ -19 ವಿರುದ್ಧದ ಹೋರಾಟಕ್ಕೆ ಪ್ರಧಾನಮಂತ್ರಿ ಪರಿಹಾರ ನಿಧಿ ಮತ್ತು ಗುಜರಾತ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 21 ಲಕ್ಷ ರೂಪಾಯಿ ದಾನ ನೀಡುವುದಾಗಿ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಹೇಳಿದೆ.''ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಸದಸ್ಯರು ಮತ್ತು ಅಪೆಕ್ಸ್ ಕೌನ್ಸಿಲ್ ಪರವಾಗಿ ಅಧ್ಯಕ್ಷ ಜಯ್ ಶಾ ಮತ್ತು ಕಾರ್ಯದರ್ಶಿ ಹಿಮಾಂಶು ಶಾ ಪ್ರಧಾನಮಂತ್ರಿ ಪರಿಹಾರ ನಿಧಿ ಮತ್ತು ಗುಜರಾತ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 21 ಲಕ್ಷ ರೂ. ಘೋಷಿಸಿದ್ದಾರೆ,'' ಎಂದು ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಏತನ್ಮಧ್ಯೆ, ಬಿಸಿಸಿಐನ ಮಾಜಿ ಕಾರ್ಯದರ್ಶಿ ನಿರಂಜನ್ ಶಾ,  ಸುರಕ್ಷತೆ ದೃಷ್ಟಿಯಿಂದ ಜನರು ಮನೆಯಲ್ಲಿಯೇ ಇರುವಂತೆ ಮನವಿ ಮಾಡಿದ್ದಾರೆ.