ಜನಪದ ಉಳಿಸಿ ಸಂಸ್ಕೃತಿ ಬೆಳೆಸಿ ಕಾರ್ಯಕ್ರಮ
Save folklore and cultivate culture program
ರಾಣೇಬೆನ್ನೂರು 20 : ಭಾರತೀಯ ಸಂಸ್ಕೃತಿಯಲ್ಲಿ ವೇದ ಇತಿಹಾಸಕಾಲಗಳಿಂದಲೂ, ಆಚಾರ, ವಿಚಾರ, ಜೊತೆಗೆ ವೇಶ,ಭೂಷಣ, ಉಡುಗೆ ತೊಡೆಗೆ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವೈವಿಧ್ಯತೆ ಮತ್ತು ಏಕತೆ ಹೊಂದಿದ್ದರಿಂದಲೇ, ಇಂದಿಗೂ ಸಹ ಮಾನಸಿಕ ಶಾಂತಿ ಮತ್ತು ನೆಮ್ಮದಿಯ ಜೀವನ ಸಾಗಿಸುತ್ತಿದ್ದೇವೆ, ಇದುವೇ ನಮ್ಮ ನೈಜ ಸಂಸ್ಕೃತಿಯಾಗಿದೆ ಎಂದು ಆರ್. ಟಿ.ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ, ಸಂಜಯ ಸಾಹುಕಾರ ಹೇಳಿದರು. ಅವರು, ಕಾಲೇಜಿನ ವಿ.ಕೆ. ಸಾಹುಕಾರ ಸಭಾಭವನದಲ್ಲಿ ಆಯೋಜಿಸಲಾಗಿದ್ದ, ಜನಪದ ಉಳಿಸಿ ಸಂಸ್ಕೃತಿ ಬೆಳೆಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭಾರತೀಯ ಸಂಸ್ಕೃತಿ ಪರಂಪರೆ ವಿಶ್ವದ ಎಲ್ಲ ರಾಷ್ಟ್ರಗಳಲ್ಲಿ ವಿಶೇಷತೆಯಾಗಿದೆ. ಭಾರತೀಯರು ನೈಜ ಮತ್ತು ನಿಜ ಸಂಸ್ಕೃತಿಯ ಹರಿಕಾರರಾಗಿದ್ದಾರೆ. ನೈಜತೆ ಮತ್ತು ಸಂಸ್ಕೃತಿ ನಮ್ಮ ಪರಂಪರೆಯಾಗಿದ್ದು, ಹಿರಿಯರು ಹಾಕಿ ಕೊಟ್ಟಿರುವ ಈ ಸಂಸ್ಕಾರವನ್ನು ಉಳಿಸಿ ಬೆಳೆಸುವುದರ ಜೊತೆಗೆ, ನಮ್ಮತನವನ್ನು ನಾವು ಅಳವಡಿಸಿಕೊಳ್ಳಬೇಕಾದ ಇಂದಿನ ಅಗತ್ಯವಿದೆ ಎಂದು ಯುವ ಸಮುದಾಯಕ್ಕೆ ಅವರು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಚಾರ್ಯ ಸಿ.ಎ. ಹರಿಹರ ಅವರು ನಮ್ಮ ಸಂಸ್ಕೃತಿ ಮತ್ತು ಪರಂಪರೆ ನಮಗೆ ಅಂದ ಮತ್ತು ಚಂದ ನಮ್ಮತನ ಎನ್ನುವುದು ನಮ್ಮ ಪೂರ್ವಜರು ಹಾಕಿಕೊಟ್ಟ ಸಂಸ್ಕಾರವಾಗಿದೆ. ಆಧುನಿಕತೆಯ ಭರಾಟೆಯಲ್ಲಿ ನಮ್ಮತನವನ್ನು ನಾವು ಕಳೆದುಕೊಳ್ಳದೆ, ಇತಿಹಾಸದ ನೈಜತೆ ಮತ್ತು ಅಂದಿನ ವಿಶಿಷ್ಟ ಪರಿಕಲ್ಪನೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ವೈವಿಧ್ಯಮಯ ವೇಷಭೂಷಣಗಳನ್ನು ಧರಿಸಿ, ಸಾರ್ವಜನಿಕರ ಗಮನ ಸೆಳೆದರು. ವೇದಿಕೆಯಲ್ಲಿ ಕಾರ್ಯದರ್ಶಿ ಸೀತಾ ಕೋಟಿ, ವಿದ್ಯಾರ್ಥಿ ಒಕ್ಕೂಟದ ಕಾರ್ಯದರ್ಶಿ, ಪ್ರೊ, ಹೆಚ್. ಜಿ. ಬಸವರಾಜ, ಸಾಂಸ್ಕೃತಿಕ ವೇದಿಕೆಯ ಕಾರ್ಯಧ್ಯಕ್ಷರು ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 