ರಕ್ತದಾನದಿಂದ ಅಮೂಲ್ಯ ಜೀವ ಉಳಿಸಿ: ಎಸ್ಬಿಐ ವ್ಯವಸ್ಥಾಪಕ ನಾಗನಗೌಡ ಕರೆ
Save precious lives through blood donation: SBI Manager Naganagouda appeals
ಶಿಗ್ಗಾವಿ, ಜು. 5: ಹಿಂಸೆಯ ಹೆಸರಿನಲ್ಲಿ ರಕ್ತ ಹರಿಸುವ ಬದಲು, ಸಾವಿನೊಂದಿಗೆ ಹೋರಾಡುತ್ತಿರುವ ಅಮೂಲ್ಯ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ನಿಜವಾದ ಮಾನವೀಯತೆ ಎಂದು ಎಸ್ಬಿಐ ಬ್ಯಾಂಕ್ ವ್ಯವಸ್ಥಾಪಕ ನಾಗನಗೌಡ ನೀರಲಗಿ ಹೇಳಿದರು.
ಪಟ್ಟಣದ ಎಸ್ಬಿಐ ಬ್ಯಾಂಕ್ ಹಾಗೂ ರಾಣೆಬೆನ್ನೂರಿನ ಬಸವೇಶ್ವರ ರಕ್ತದಾನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಉದ್ಯಮಿ ರವಿ ಜಗದಣ್ಣವರ ಮಾತನಾಡಿ, ಒಂದು ಯೂನಿಟ್ ರಕ್ತದಿಂದ ನಾಲ್ವರ ಜೀವ ಉಳಿಸಲು ಸಾಧ್ಯವಾಗುತ್ತದೆ. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಾಗಿಲ್ಲ. ವಿಶೇಷವಾಗಿ ’ಓ’ ನೆಗೆಟಿವ್ ರಕ್ತದ ಗುಂಪಿನ ಕೊರತೆ ಹೆಚ್ಚಿದ್ದು, ಆ ರಕ್ತದ ಗುಂಪಿನವರು ನಿಯಮಿತವಾಗಿ ರಕ್ತದಾನ ಮಾಡುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.
ಅನಸೂಯ ಯಲಿಗಾರ ಸೇವಾ ಸಂಸ್ಥೆಯ ಅಧ್ಯಕ್ಷ ಸುರೇಶ್ ಯಲಿಗಾರ ಮಾತನಾಡಿ, ರಕ್ತದಾನವು ಅತ್ಯಂತ ಶ್ರೇಷ್ಠ ದಾನವಾಗಿದ್ದು, ಒಬ್ಬ ವ್ಯಕ್ತಿಯ ರಕ್ತದಾನ ಮತ್ತೊಬ್ಬರ ಜೀವ ಉಳಿಸುವ ಮಹತ್ತರ ಕಾರ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಶಾಂತ ಅತ್ತಿಗೇರಿ, ಅರುಣ ಪೂಜಾರ, ಶರಣ ಹೆಸರೂರ, ನಿತಿನ್ ಬ್ರಹ್ಮವರ, ಡಾ. ಸಂತೋಷ ಮೊಟಗಿ, ನಾಗರತ್ನ ಅಣ್ಣಿಗೇರಿ, ರೇಖಾ ಗುರ್ಪನವರ, ಕವನಾ ಸೇರಿದಂತೆ ಎಸ್ಬಿಐ ಬ್ಯಾಂಕ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 