ಸವಿತಾ ಮಹರ್ಷಿ ಜಯಂತಿ : ಪೂರ್ವಸಿದ್ಧತಾ ಸಭೆ
Savita Maharshi Jayanti: Preparatory meeting
ಗದಗ 13: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರ ಅಧ್ಯಕ್ಷತೆಯಲ್ಲಿ ಸವಿತಾ ಮಹರ್ಷಿ ಜಯಂತಿ ಕುರಿತು ಪೂರ್ವಸಿದ್ಧತಾ ಸಭೆಯು ಜರುಗಿತು. ಸವಿತಾ ಮಹರ್ಷಿ ಜಯಂತಿಯ ದಿನಾಂಕವನ್ನು ಜಿಲ್ಲಾಡಳಿತ ಹಾಗೂ ಸಮಾಜದವರು ಸಮಾಲೋಚಿಸಿದ ನಂತರ ನಿಗದಿಪಡಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ತಾಲೂಕು ಮಟ್ಟದಲ್ಲಿಯೂ ಸವಿತಾ ಮಹರ್ಷಿ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕು. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಅರ್ಥಪೂರ್ಣ ಆಚರಣೆಗೆ ಕ್ರಮ ಕೈಗೊಳ್ಳಬೇಕು. ಎಸ್.ಎಸ್ ಎಲ್ ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಮಾಜದ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಜರುಗಲಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ವೇದಿಕೆ ವ್ಯವಸ್ಥೆ, ಉಪನ್ಯಾಸಕರ ನೇಮಕ, ಬ್ಯಾನರ್ ಅಳವಡಿಕೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ವಾರ್ತಾ ಮತ್ತು ಸಾ.ಸಂ.ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಸಮಾಜದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರನ್ನು ಸ್ವಾಗತಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 