ಕಲಾವಿದರಿಗೆ ಪೂರಕ ಯೋಜನೆಗಳು ಪ್ರತಿಭೆಗಳಿಗೆ ತಲುಪಲಿ: ಪಿ. ಗಾದೆಪ್ಪ
Schemes supporting artists should reach the talented: P. Gadeppa
ಬಳ್ಳಾರಿ, ಆ. 18: ಕಲಾವಿದರಿಗೆ ಪೂರಕವಾಗಿರುವ ವಿವಿಧ ಯೋಜನೆಗಳು ಜಿಲ್ಲೆಯ ಎಲ್ಲ ಕಲಾ ಪ್ರತಿಭೆಗಳಿಗೆ ತಲುಪುವಂತಾಗಬೇಕು. ಕಲಾವಿದರಿಗೆ ಅಗತ್ಯವಿರುವ ಸಹಕಾರವನ್ನು ನೀಡಲು ತಾವು ಸಿದ್ಧರಿರುವುದಾಗಿ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ ಹೇಳಿದರು.
ನಗರದ ಶ್ರೀಮೇಧ ಕಾಲೇಜಿನಲ್ಲಿ ಶ್ರೀ ಮಾತೃ ಮಹಿಳಾ ಮಂಡಳಿ (ರಿ.) ಹಾಗೂ ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ‘ಕಲ್ಚರಲ್ ಫಂಕ್ಷನ್ ಪ್ರೊಡಕ್ಷನ್ ಗ್ರಾಂಟ್ ಸ್ಕೀಮ್’ ಅಡಿಯಲ್ಲಿ ಆಯೋಜಿಸಿದ್ದ ಸದ್ಗುರು ಮಹರ್ಷಿ ಜಯದೇವ್ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀಮೇಧ ಕಾಲೇಜಿನ ಪ್ರಾಂಶುಪಾಲ ರಾಮ್ ಕಿರಣ್ ಮಾತನಾಡಿ, ಕಾಲೇಜಿನಲ್ಲಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ಸಂಗತಿ. ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕಲೆ ಮತ್ತು ಸಂಸ್ಕೃತಿಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಲು ಕಾಲೇಜು ಉತ್ತಮ ಅವಕಾಶಗಳನ್ನು ಕಲ್ಪಿಸುತ್ತಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ ಅವರು ಮಹರ್ಷಿ ಜಯದೇವ್ ಅವರ ಕುರಿತು ಉಪನ್ಯಾಸ ನೀಡಿದರು. 12ನೇ ಶತಮಾನಕ್ಕೆ ಸೇರಿದ ಒಡಿಶಾದ ಕವಿ ಮಹರ್ಷಿ ಜಯದೇವ್ ಅವರು ತಮ್ಮ ಕಾವ್ಯ ಹಾಗೂ ಸಾಹಿತ್ಯದ ಮೂಲಕ ಇಂದಿಗೂ ಸ್ಮರಣೀಯರಾಗಿದ್ದಾರೆ. ಅವರ ಕೃತಿಗಳು 21ನೇ ಶತಮಾನದಲ್ಲಿಯೂ ಪ್ರಸ್ತುತವಾಗಿರುವುದು ನಮ್ಮ ಸೌಭಾಗ್ಯ ಎಂದರು.
ಸಂಸ್ಕಾರ ಭಾರತಿ ಕ್ರಾಂತಿಯ ಕಾರ್ಯದರ್ಶಿ ಶ್ರೀನಿವಾಸ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕಲೆ ಮತ್ತು ಸಂಸ್ಕೃತಿಯ ಮೇಲಿನ ಆಸಕ್ತಿ ಕಡಿಮೆಯಾಗುತ್ತಿದೆ. ಈ ಸಂದರ್ಭದಲ್ಲಿ ಶ್ರೀ ಮಾತೃ ಮಹಿಳಾ ಮಂಡಳಿಯು ಕಲೆ-ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಉತ್ತಮ ಕಾರ್ಯ ಮಾಡುತ್ತಿದೆ. ಮಕ್ಕಳಲ್ಲಿ ಕಲಾ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಪ್ರಯತ್ನವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಕಲಾವಿದರ ವೇದಿಕೆ ಅಧ್ಯಕ್ಷ ಎಲ್ಲನಗೌಡ ಶಂಕರಬಂಡೆ ಸೇರಿದಂತೆ ಗಣ್ಯರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು. ಕೆ.ಸಿ. ಸುಂಕಣ್ಣ ಮತ್ತು ತಂಡದವರಿಂದ ಸಾಂಸ್ಕೃತಿಕ ನೃತ್ಯ, ಸಿ. ತುಳಸಿ ಮತ್ತು ತಂಡದವರಿಂದ ತೊಗಲುಗೊಂಬೆ ಪ್ರದರ್ಶನ ನಡೆಯಿತು. ಶರಣ ಬಸವ ಹಾಗೂ ವೀರೇಶ್ ಹನಗ ಅವರು ವಚನ ಗಾಯನ ಮತ್ತು ಪ್ರಾರ್ಥನಾ ಗೀತೆ ಪ್ರಸ್ತುತಪಡಿಸಿದರು. ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು.
ಶ್ರೀ ಮಾತೃ ಮಹಿಳಾ ಮಂಡಳಿ ಅಧ್ಯಕ್ಷೆ ಕೆ. ಪುಷ್ಪ ಚಂದ್ರಶೇಖರ್ ಮಾತನಾಡಿ, ಶಾಲಾ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಹೊರತರುವ ಉದ್ದೇಶದಿಂದ ಸಂಸ್ಥೆಯ ವತಿಯಿಂದ ಪ್ರತಿವರ್ಷ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕಲೆಯಲ್ಲಿ ಆಸಕ್ತಿ ಹೊಂದಿರುವ ಬಡ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಉಚಿತವಾಗಿ ಭರತನಾಟ್ಯ ತರಬೇತಿ ನೀಡಲಾಗುವುದು ಎಂದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 