ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ವತಿಯಿಂದ ಶಿಷ್ಯವೇತನ ವಿತರಣೆ
Scholarship distribution by Rakesh Siddaramaiah Trust
ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ವತಿಯಿಂದ ಶಿಷ್ಯವೇತನ ವಿತರಣೆ
ಗದಗ 06: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಇಂದಿನ ವಿದ್ಯಾರ್ಥಿಗಳೆ ಮುಂದೆ ದೇಶದ ಸಂಪತ್ತು. ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಪ್ರೊತ್ಸಾಹ ನೀಡುತ್ತಿರುವುದು ಸಂತಸದ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಅವರು ನಗರದ ಕನಕ ಭವನದಲ್ಲಿ ನಡೆದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕಾಳಿದಾಸ, ಸಂಗೊಳ್ಳಿ ರಾಯಣ್ಣ ವಿದ್ಯಾರ್ಥಿ ನಿಲಯ ಹಳೆ ವಿದ್ಯಾರ್ಥಿಗಳ ಸಂಘ, ಕರ್ನಾಟಕ ಪ್ರದೇಶ ಕುರುಬರ ಸಂಘ, ರಾಕೇಶ ಸಿದ್ದರಾಮಯ್ಯ ಟ್ರಸ್ಟ ಹಾಗೂ ಕಾಳಿದಾಸ ಶಿಕ್ಷಣ ಸಮಿತಿ ಇವರುಗಳ ಸಂಯುಕ್ತಾಶ್ರಯದಲ್ಲಿ ಸ್ವತಂತ್ರ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಅಲ್ಪಾವಧಿ ಕೌಶಲ್ಯಾದರಿತ ಕೋರ್ಸುಗಳ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಕಿಟ್ ವಿತರಣೆ ಹಾಗೂ ರಾಕೇಶ ಸಿದ್ದರಾಮಯ್ಯ ಶಿಷ್ಯವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಉತ್ತಮ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸಮಾಜದ ದೊಡ್ಡ ಆಸ್ತಿಯಾಗಿದ್ದು, ಉನ್ನತ ಹುದ್ದೆಯನ್ನು ಪಡೆದು ಸಮಾಜದಲ್ಲಿ ತಾವು ಸೇವೆ ಸಲ್ಲಿಸಬೇಕು ಮಕ್ಕಳು ಕೇವಲ ಉದ್ಯೋಗ ಪಡೆಯುವ ನಿಟ್ಟಿನಲ್ಲಿ ಕಲಿಯುತ್ತಿದ್ದಾರೆ ಹೊರತು ಸಮಾಜಸೇವೆ ಮಾಡಬೇಕು ಎಂಬುವ ಬಯಕೆ ಅವರಿಗೆ ಇಲ್ಲ. ಗ್ರಾಮೀಣ ಭಾಗದಲ್ಲಿ ಕಲಿಯುವ ಮಕ್ಕಳು ನಿಮ್ಮ ಹಳ್ಳಿಗಳ ಅಭಿವೃದ್ಧಿಗೆ ಶ್ರಮಿಸಬೇಕು. ಕೇವಲ ಪದವಿ ಗಳಿಸುವುದೇ ಜೀವನವಲ್ಲ ಅದರಲ್ಲಿ ಮಾನವೀಯ ಮೌಲ್ಯಗಳನ್ನು ಕಲಿತು ಸಮಾಜಕ್ಕೆ ತಾವೆಲ್ಲ ದಾರಿಯಾಗಬೇಕು ಎಂದರು.
ರೋಣ ಶಾಸಕ ಜಿ.ಎಸ್. ಪಾಟೀಲ ಅವರು ಮಾತನಾಡಿ ನಗರದ ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಪ್ರಾಮುಖ್ಯತೆ ಪಡೆದಿದೆ. ಕುರುಬರ ಸಂಘ ಸ್ಥಾಪನೆಯಾದ ನಂತರ ಜಿಲ್ಲೆಯಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ ರಾಕೇಶ ಸಿದ್ದರಾಮಯ್ಯ ಅವರ ಸ್ಮರಣೆಯೊಂದಿಗೆ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವ ಮೂಲಕ ಅವರ ಹೆಸರನ್ನು ಅಜರಾಮರಗೊಳಿಸಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ ಅವರು ಮಾತನಾಡಿ, 21ನೇ ಶತಮಾನ ಜ್ಞಾನಯುಗವಾಗಿದೆ. ಜ್ಞಾನ ಮತ್ತು ಕೌಶಲ್ಯ ಹೊಂದಿದ ವಿದ್ಯಾರ್ಥಿಗಳಿಗೆ ಉನ್ನತ ಸ್ಥಾನಮಾನ, ಗೌರವ ಸಿಕ್ಕೇ ಸಿಗುತ್ತದೆ. ವಿದ್ಯೆಗಿಂತ ಮಿಗಿಲಾದ ವಸ್ತು ಯಾವುದು ಇಲ್ಲ, ಶ್ರೀಮಂತಿಕೆ, ಅಧಿಕಾರ ಶಾಶ್ವತವಲ್ಲ ಆದರೆ, ಶಿಕ್ಷಣ ನಮ್ಮ ಕೊನೆಯವರೆಗೂ ಇರುತ್ತದೆ. ಇಂದು ಸನ್ಮಾನಿತರಾದ ವಿದ್ಯಾರ್ಥಿಗಳಿಗೆ ಮುಂದಿನ ದಿನಮಾನಗಳಲ್ಲಿ ಇನ್ನಷ್ಟು ಸಾಧನೆ ಮಾಡಬೇಕು. ಕುರುಬ ಸಮಾಜದ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದೆ ಬರಬೇಕು. ಐಎಎಸ್, ಐಪಿಎಸ್ ಶಿಕ್ಷಣ ಪಡೆದು ಸಮಾಜಕ್ಕೆ ಕೊಡುಗೆ ನೀಡಬೇಕು ವಿದ್ಯೆ ಮೂಲಕ ಎಲ್ಲವನ್ನು ಸಾಧಿಸಲು ಸಾಧ್ಯವಿದೆ ಎಂದು ಹೇಳಿದರು.
ವೇದಿಕೆ ಮೇಲೆ ಕುರುಬರ ಸಂಘ ಜಿಲ್ಲಾಧ್ಯಕ್ಷ ಫಕ್ಕೀರ್ಪ ಹೆಬಸೂರು, ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ನಟರಾಜ ಜಿ.ಆರ್, ಶಶಿಧರ ರೊಳ್ಳಿ, ಬಸವರಾಜ ಗೊರವರ, ರಾಮಕೃಷ್ಣ ರೊಳ್ಳಿ, ಮಾಜಿ ಶಾಸಕರಾದ ಬಿ.ಆರ್.ಯಾವಗಲ್, ಜಿ.ಎಸ್.ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಕೆ.ಎಚ್.ಪಾಟೀಲ, ಚನ್ನಮ್ಮ ಹುಳಕಣ್ಣವರ, ನೌಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳಾರಿ, ರವಿ ಗುಂಜಿಕಾರ, ಪ್ರಕಾಶ ಕರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 