ಶಾಲೆಯ ಮಕ್ಕಳ ಪದಗ್ರಹಣ ಸಮಾರಂಭ
School Children's Graduation Ceremony
ವಿಜಯಪುರ 28 : ಇಲ್ಲಿನ ಫ.ಗು.ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜಲ ನಗರದಲ್ಲಿರುವ ಬಿ.ಎಂ. ಪಾಟೀಲ್ ಪಬ್ಲಿಕ್ ಶಾಲೆಯ ಮಕ್ಕಳ ಪದಗ್ರಹಣ ಸಮಾರಂಭ ಏರಿ್ಡಸಲಾಗಿತ್ತು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಜವಾಬ್ದಾರಿ, ಶಿಸ್ತು ಹಾಗೂ ಸೇವಾ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಶಾಲೆಯಲ್ಲಿ ವಿದ್ಯಾರ್ಥಿಗಳ ಚುನಾವಣೆ ನಡೆಸಲಾಗಿತ್ತು. ಇದರಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಪದಗ್ರಹಣ ಬೋಧಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ನಿತಿನ್ ಋಣವಾಲ್ ಮಾತನಾಡಿ, ವಿದ್ಯಾರ್ಥಿಗಳಿಗೆ ಮೌಲ್ಯಯುತ ಸಲಹೆಗಳನ್ನು ನೀಡಿ, ಪಠ್ಯೇತರ ಚಟುವಟಿಕೆಗಳನ್ನು ಕೂಡ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಶಾಲೆಯ ಪ್ರಾಚಾರ್ಯ ವಿಕ್ರಂ ನಾರ್ವೇಕರ್, ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಹಿರಿಯ ಸಂಯೋಜಕಿ ಜಯಾ ಗಲಗಲಿ, ಮಕ್ಕಳು ಕ್ರಿಯಾತ್ಮಕವಾಗಿ ಬೆಳೆಯಲು ಸಲಹೆ ನೀಡಿದರು. ಶಾಲಾ ನಾಯಕ, ಉಪ ನಾಯಕ, ಹೌಸ್ ಕ್ಯಾಪ್ಟನ್ಗಳು ಹಾಗೂ ಇತರ ವಿದ್ಯಾರ್ಥಿ ಪ್ರತಿನಿಧಿಗಳು ಪದಗ್ರಹಣ ಮಾಡಿ, ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು. ಪಾಲಕರು ಕೂಡ ಭಾಗವಹಿಸಿದ್ದು ವಿಶೇಷವಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 