ಯರಗಟ್ಟಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ
School Parliament Election at Yaragatti School
ಲೋಕದರ್ಶನ ವರದಿ
ಯರಗಟ್ಟಿ 25: ಪಟ್ಟಣದ ಕರ್ನಾಟಕ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ ಚುನಾವಣೆ ಯಶಸ್ವಿಯಾಗಿ ನಡೆಯಿತು. ಸಂಸ್ಥೆಯ ಅಧ್ಯಕ್ಷ ರುದ್ರ್ಪ ಹಟ್ಟಿ ಮಾತನಾಡಿ, ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರನ್ನು ಮತದಾನದ ಮೂಲಕ ಆಯ್ಕೆ ಮಾಡುವ ವ್ಯವಸ್ಥೆ ಮಕ್ಕಳಿಗೆ ಪ್ರಜಾಪ್ರಭುತ್ವ ಹಾಗೂ ಚುನಾವಣಾ ಪ್ರಕ್ರಿಯೆಯ ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದು ಹೇಳಿದರು. ಶಿಕ್ಷಣ ಇಲಾಖೆಯ ಈ ಕ್ರಮ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಹಾಗೂ ಜವಾಬ್ದಾರಿಯ ಮನೋಭಾವ ಬೆಳೆಸುವಲ್ಲಿ ಪರಿಣಾಮಕಾರಿಯಾಗಿದೆ ಎಂದರು. ಪ್ರತಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ಶಾಲಾ ಸಂಸತ್ ಚುನಾವಣೆ ನಡೆಸುವ ಮೂಲಕ ವಿದ್ಯಾರ್ಥಿ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಪ್ರಕ್ರಿಯೆಯಿಂದ ದೇಶದ ರಾಜಕೀಯ ವ್ಯವಸ್ಥೆ, ಮತದಾನದ ಮಹತ್ವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಮಕ್ಕಳಿಗೆ ಪ್ರಾಯೋಗಿಕ ಅನುಭವ ದೊರೆಯುತ್ತದೆ ಎಂದು ತಿಳಿಸಿದರು.
ಪ್ರಧಾನ ಗುರು ವಿ.ಎಂ. ಹಾದಿಮನಿ ಮಾತನಾಡಿ, ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ, ಶಿಕ್ಷಣ ಸಚಿವ, ಸ್ವಚ್ಛತಾ ಸಚಿವ, ಗ್ರಂಥಾಲಯ, ರಕ್ಷಣಾ, ಆಹಾರ ಸೇರಿದಂತೆ ವಿವಿಧ ಖಾತೆಗಳ ಜವಾಬ್ದಾರಿಗಳನ್ನು ವಹಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು, ಸಂಘಟನೆ ಹಾಗೂ ಜವಾಬ್ದಾರಿಯ ಗುಣಗಳು ಬೆಳೆಯುವುದರ ಜೊತೆಗೆ ಶಾಲೆಯ ನಿರ್ವಹಣೆಯಲ್ಲೂ ಅವರ ಸಕ್ರಿಯ ಪಾಲ್ಗೊಳ್ಳುವಿಕೆ ಹೆಚ್ಚುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಅಶೋಕ ಹೊಂಗಳ, ಸಮೂಹ ಸಂಪನ್ಮೂಲ ವ್ಯಕ್ತಿ ವಸಂತ ಬಡಿಗೇರ, ಪಾಲಕರ ಪ್ರತಿನಿಧಿಗಳಾದ ಶಾವಲಿ ಕನರ್ಜಿ, ದುಂಡಯ್ಯ ಹಿರೇಮಠ, ಮಲ್ಲಿಕಾರ್ಜುನ ಶಿವಣ್ಣವರ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಪಾಲಕರು ಉಪಸ್ಥಿತರಿದ್ದರು.
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ 