ಮೈಸೂರು, ನ.10: ಶಾಲಾ ಬಸ್ಸೊಂದು ಉರುಳಿಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಮಧುಗಿರಿ ಕೊಪ್ಪಲು ಎಂಬ ಗ್ರಾಮದಲ್ಲಿ ನಡೆದಿದೆ. ಗಾಯಾಳು ವಿದ್ಯಾರ್ಥಿ ಗಳನ್ನು ಹುಣಸೂರು ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ರ್ನಕುಲಂನಿಂದ ಪ್ರವಾಸಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.