ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಶಾಲಾ ಬಸ್ ಗಳಿಗೆ ಚಾಲನೆ
School buses launched for students' education
ರಾಯಬಾಗ 18: ತಾಲೂಕಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲು ಸುಸಜ್ಜಿತ ಎರಡು ಹೊಸ ಶಾಲಾ ಬಸ್ ಪ್ರಾರಂಭಿಸಲಾಗಿದೆ ಎಂದು ಮಾಜಿ ಸಂಸದ, ಎಸ್.ಪಿ.ಎಮ್.ಚೇರಮನ್ ಅಮರಸಿಂಹ ಪಾಟೀಲ ಹೇಳಿದರು.ಬುಧವಾರ ಪಟ್ಟಣದ ಶಿಕ್ಷಣ ಪ್ರಸಾರಕ ಮಂಡಳದ ಆರಿ್ವ.ಆರ್. ಪ್ರೌಢಶಾಲೆ ಆವರಣದಲ್ಲಿ ಹೊಸ ಶಾಲಾ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿದರು.ಸಂಸ್ಥೆ ಕಾರ್ಯದರ್ಶಿ ಶಶಿಕಲಾ ಸಿಂಗಾಡಿ ಮಾತನಾಡಿ, ಅಭಾಜಿಯವರು ಕಟ್ಟಿದ ಈ ಸಂಸ್ಥೆಯು ಇಂದು ಹೆಮ್ಮರವಾಗಿ ಬೆಳೆದಿದೆ, ಇಂದು ಯುಕೆಜಿ ಯಿಂದ ಸ್ನಾತಕೋತ್ತರ ಪದವಿ ವರೆಗೆ ಎಲ್ಲ ವಿಭಾಗಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿಭಾ ವಸಂತರಾವ ಪಾಟೀಲ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳ ಸುರಕ್ಷಿತವಾಗಿ ಹೋಗಿ ಬರಲು ಕ್ಯಾಮೆರಾ ಮತ್ತು ಜಿ.ಪಿ.ಎಸ್ ಅಳವಡಿಸಿರುವ ಈ ಬಸ್ ಗಳನ್ನು ಪ್ರಾರಂಭಿಸಲಾಗಿದೆ, ವಿದ್ಯಾರ್ಥಿಗಳ ಪಾಲಕರು ಮತ್ತು ಶಾಲೆ ಸಿಬ್ಬಂದಿಗಳು ತಮ್ಮ ವಿದ್ಯಾರ್ಥಿಗಳ ಚಲನವಲನ ಗಮನಿಸಬಹುದಾಗಿದೆ ಎಂದು ತಿಳಿಸಿದರು.ಸಂಸ್ಥೆಯ ನಿರ್ದೇಶಕಿ ಭಾಗ್ಯಶ್ರೀ ಪಾಟೀಲ, ಶಶಿಕಲಾ ಸಿಂಗಾಡಿ ಹಾಗೂ ಸಂಸ್ಥೆಯ ಎಲ್ಲ ಶಾಲಾ, ಕಾಲೇಜುಗಳ ಪ್ರಾಚಾರ್ಯರು, ಮುಖ್ಯೋಪಾಧ್ಯಾಯರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 