ಶಾಲಾ ಮಕ್ಕಳು ಗ್ರಂಥಾಲಯ ಸದುಪಯೋಗ ಪಡೆದುಕೊಳ್ಳಬೇಕು: ಬಸವರಾಜ ಪಣದಿ
School children should make good use of the library: Basavaraja Panadi
ಲೋಕದರ್ಶನ ವರದಿ
ಬೆಟಗೇರಿ 25 : ಗ್ರಾಮೀಣ ವಲಯದಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಅರಿವು ಕೇಂದ್ರಗಳು ಶಾಲಾ ಮಕ್ಕಳ ಕಲಿಕೆಗೆ ಆಶಾಕಿರಣವಿದ್ದಂತೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯದ ಸಹಯೋಗದಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಏ.8 ರಿಂದ ಮೇ.24 ತನಕ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೂಪ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಯುಗದಲ್ಲಿ ಶಾಲಾ ಮಕ್ಕಳು ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಮತ್ತು ಗ್ರಂಥಾಲಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಸ್ಥಳೀಯ ಶಿಕ್ಷಣಪ್ರೇಮಿ ಲಖನ ಚಂದರಗಿ ಮಾತನಾಡಿ, ಜ್ಞಾನ ಸಂಪತ್ತಿಗಿಂತ ಇನ್ನೂಂದು ಸಂಪತ್ತಿಲ್ಲಾ, ನಾವು ಕಷ್ಟಪಟ್ಟು ಸಂಪಾದಿಸಿದ ಆಸ್ತಿ, ಅಂತಸ್ತು ನಶಿಸಿ ಹೋಗಬಹುದು, ಜ್ಞಾನ ಎಂದು ನಶಿಸಿ ಹೋಗುವುದಿಲ್ಲಾ, ವಿದ್ಯಾರ್ಥಿಗಳು ಶಾಲಾ ಬಿಡುವಿನ ವೇಳೆಯಲ್ಲಿ ಉತ್ತಮ ಪುಸ್ತಕಗಳು ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗುವ ಪುಸ್ತಕಗಳನ್ನು ಓದಬೇಕು ಎಂದು ಅಭಿಪ್ರಾಯಿಸಿದರು.
ಸ್ಥಳೀಯ ಗ್ರಾಪಂ ಕಾರ್ಯದರ್ಶಿ ಮಾರುತಿ ತಳವಾರ ಅಧ್ಯಕ್ಷತೆ ವಹಿಸಿದ್ದರು. ಏ.8 ರಿಂದ ಮೇ.24 ತನಕ ಸ್ಥಳೀಯ ಗ್ರಂಥಾಲಯದಲ್ಲಿ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ನೋಟಬುಕ್ಕ, ಪೆನ್ನ ಸೇರಿದಂತೆ ಶೈಕ್ಷಣಿಕ ಕಲಿಕಾ ಉಪಕರಣಗಳನ್ನು ಇಲ್ಲಿಯ ಗ್ರಾಮ ಪಂಚಾಯತ ವತಿಯಿಂದ ಈ ವೇಳೆ ವಿತರಿಸಿದರು. ರಾಮಣ್ಣ ಮುಧೋಳ, ವಿಠ್ಠಲ ಕೋಣಿ, ಸಿದ್ಧಾರೂಢ ಸವತಿಕಾಯಿ, ಮಣಿಕಂಠ ಐದುಡ್ಡಿ, ಗ್ರಾಪಂ ಸಿಬ್ಬಂದಿ, ಗಣ್ಯರು, ಶಿಕ್ಷಣ ಪ್ರೇಮಿಗಳು, ಶಾಲಾ ಮಕ್ಕಳು ಇದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 