ಬಾಲಮಂದಿರ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ
School commencement ceremony at Balamandir High School
ಲೋಕದರ್ಶನ ವರದಿ
ಕಾರವಾರ 04: ಎಜ್ಯುಕೇಶನ್ ಸೊಸೈಟಿಯ ಬಾಲಮಂದಿರ ಪ್ರೌಢಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯನ್ನು ತೋರಣ, ಹೂವಿನ ಅಲಂಕಾರ ಹಾಗೂ ಸ್ವಾಗತ ಫಲಕಗಳಿಂದ ಸಿಂಗರಿಸಲಾಗಿತ್ತು. ಬೇಸಿಗೆ ರಜೆಯ ಬಳಿಕ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಆತ್ಮೀಯವಾಗಿ ಸ್ವಾಗತಿಸಿ ಸಿಹಿ ಹಂಚಿದರು. ಕಾರ್ಯಕ್ರಮವು ಗಣೇಶ ಹಾಗೂ ಶಾರದಾ ಮಾತೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮತ್ತು ಆರತಿ ಬೆಳಗುವ ಮೂಲಕ ಆರಂಭಗೊಂಡಿತು.
ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಮಾತನಾಡಿ, 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶಾಲೆಯು ಶೇ.99 ಫಲಿತಾಂಶ ಪಡೆದಿರುವುದನ್ನು ತಿಳಿಸಿದರು. ಕು. ಸಾಯಿಗಣೇಶ ಆರ್. ಮಡಿವಾಳ 622 ಅಂಕಗಳೊಂದಿಗೆ ರಾಜ್ಯಕ್ಕೆ 4ನೇ, ಜಿಲ್ಲೆಗೆ 3ನೇ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದು, ಇತರ ವಿದ್ಯಾರ್ಥಿಗಳೂ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಒಟ್ಟು 32 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ. ಸಾಧಕರ ಫಲಕಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ವಿಭಾಗ ಮುಖ್ಯಸ್ಥ ನಜಿರುದ್ಧೀನ್ ಸೈಯದ್, ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ ಆರ್. ನಾಯ್ಕ, ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕ-ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಉತ್ಸಾಹಭರಿತ ವಾತಾವರಣದಲ್ಲಿ ಶಾಲಾ ಪ್ರಾರಂಭೋತ್ಸವ ಯಶಸ್ವಿಯಾಗಿ ನೆರವೇರಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 