ತಾಲೂಕಿನಲ್ಲಿ ಶಾಲಾ ಕೊಠಡಿಗಳಿಗೆ ಬೇಕಿದೆ ಕಾಯಕಲ್ಪ 86 ಕೊಠಡಿಗಳು ಸಂಪೂರ್ಣ ಶಿಥಿಲ, ಅನುದಾನದ್ದೇ ಸಮಸ್ಯೆ : ಮಹಾಂತೇಶ ತೋಪಲಕಟ್ಟಿ
School rooms in the taluk need renovation, 86 rooms are completely dilapidated, the problem is the f
ಲೋಕದರ್ಶನ ವರದಿ
ಹುನಗುಂದ 28: ತಾಲೂಕಿನಲ್ಲಿ ಶಾಲಾ ಕೊಠಡಿಗಳಿಗೆ ಬೇಕಿದೆ ಕಾಯಕಲ್ಪ 86 ಕೊಠಡಿಗಳು ಸಂಪೂರ್ಣ ಶಿಥಿಲ, ಅನುದಾನದ್ದೇ ಸಮಸ್ಯೆ ಽ ಕೊಠಡಿಗಳ ಕೊರತೆಯಿಂದ ಸಮಸ್ಯೆ! ಸಿಗದ ಅನುದಾನ ಸರಕಾರಿ ಶಾಲೆಗಳಿಗೆ ಮೂಲಸೌಕರ್ಯದ್ದೇ ಚಿಂತೆ
ಎರಡು ತಿಂಗಳ ರಜೆ ನಂತರ ತಾಲೂಕಾ ದ್ಯಂತ ಸರಕಾರಿ ಶಾಲೆಗಳು ಆರಂಭವಾಗುತ್ತಿವೆ. ಆದರೆ ತಾಲೂಕಿನ ಸರಕಾರಿ ಶಾಲೆಗಳ ಸ್ಥಿತಿ ಹೇಳಿಕೊಳ್ಳುವಂತಿಲ್ಲ. ಒಟ್ಟು 86 ಕೊಠಡಿಗಳು ಶಿಥಿಲಗೊಂಡಿದ್ದು, ಹೀಗಾಗಿ ಸರಕಾರಿ ಶಾಲೆಗಳ ಸ್ಥಿತಿ ದೇವರಿಗೇ ಪ್ರೀತಿ ಎನ್ನುವಂತಿದೆ. ಸರಕಾರಿ ಶಾಲೆಗಳಲ್ಲಿ ಕಟ್ಟಡ ಸೇರಿದಂತೆ ಮೂಲಸೌಲ‘್ಯಗಳ ಕೊರತೆಯಿಂದ ದಾಖಲಾತಿ ಹೆಚ್ಚಿಸಿಕೊಳ್ಳಲು ಸರಕಾರಿ ಶಾಲೆಗಳು ನಾನಾ ಕಸರತ್ತುಗಳನ್ನು ನಡೆಸುತ್ತಿವೆ.
ಇಷ್ಟಾದರೂ ಸಾಕಷ್ಟು ಅನುದಾನ ಸಿಗದೆ ತಾಲೂಕಿನ ಶಾಲಾ ಕಟ್ಟಡಗಳು ಅಭಿವೃದ್ಧಿಗಾಗಿ ಎದುರು ನೋಡುತ್ತಿವೆ. ತಾಲೂಕಿನಾದ್ಯಂತ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆಸಕ್ತಿ ವಹಿಸಬೇಕಿದೆ. ನಗರದ ವಿದ್ಯಾನಗದದ ಪಿ.ಎಂ ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆ 7 ಕೊಠಡಿಗಳು ಶಿಥಿಲಗೊಂಡಿರುವದು.
ತಾಲೂಕಿನ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದೆಯಾದರೂ ಶಾಲೆಗಳಿಗೆ ಅಗತ್ಯ ಮೂಲ ಸೌಲಭ್ಯಗಳ ಕೊರತೆಯಿಂದ ಸಾಕಷ್ಟು ಸಮಸ್ಯೆಯಾಗಿದೆ. ಖಾಸಗಿ ಶಾಲೆಗಳ ಅಬ್ಬರಕ್ಕೆ ಸ್ಪರ್ಧೆಯೊಡ್ಡಬಲ್ಲ ರೀತಿ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಸಾಕಷ್ಟು ಸಮಸ್ಯೆಯಾಗಲಿದೆ.
ಹೀಗಾಗಿ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲೇಬೇಕಾದ ಅನಿವಾರ್ಯತೆ ಇದೆ. ಆದರೆ ಶಿಥಿಲಗೊಂಡಿರುವ ಕೊಠಡಿಗಳ ಮರು ನಿರ್ಮಾಣ ಹಾಗೂ ಕೊಠಡಿಗಳನ್ನು ದುರಸ್ತಿ ಮಾಡಲು ಸೂಕ್ತ ಅನುದಾನದ ಕೊರತೆಯಿಂದ ಸಾಧ್ಯವಾಗದೇ ಸರಕಾರಿ ಶಾಲೆಗಳು ಎಂದರೆ ಮೂಗು ಮುರಿಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಅಂಗ್ಲ ಮಾಧ್ಯಮ ಮತ್ತು ಖಾಸಗಿ ಶಾಲೆಗಳ ವ್ಯಾಮೋಹದಿಂದ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾಗುತ್ತಲೇ ಇದೆ. ಆದರೆ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಮಕ್ಕಳನ್ನು ಆಕರ್ಷಿಸಬೇಕಿದ್ದ ಶಿಕ್ಷಣ ಇಲಾಖೆ ಮಾತ್ರ ಅನುದಾನ ಕೊರತೆಯ ನೆಪವೊಡ್ಡಿ ಕೈಚೆಲ್ಲಿ ಕೂತಂತೆ ಭಾಸವಾಗುತ್ತಿದೆ.
ಆದರೆ ಸಾಕಷ್ಟು ಶಾಲೆಗಳಲ್ಲಿ ಕೊಠಡಿಗಳ ಕೊರತೆಯಿಂದ ಒಂದೇ ಕೊಠಡಿಯಲ್ಲಿ ನಾನಾ ತರಗತಿಗಳ ವಿದ್ಯಾರ್ಥಿಗಳನ್ನು ಕೂರಿಸಿ ಪಾಠ ಮಾಡಬೇಕಾದ ಪರಿಸ್ಥಿತಿ ಇದೆ. ಭಯದ ವಾತಾವರಣದಲ್ಲಿ ತರಗತಿಗಳನ್ನು ನಡೆಸಬೇಕಿದೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯ ಚಾವಣಿ ಕಿತ್ತು ಹೋಗಿದೆ.
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ 