ವಿಜ್ಞಾನ ಸಂಭ್ರಮ! ಮಕ್ಕಳಲ್ಲಿಂದು ಮೂಡಿದ ಸಂಶೋಧನಾ ಮನೋಭಾವ
Science festival! The research spirit instilled in children
ಮುಂಡಗೋಡ 02 : ತಾಲೂಕಿನ ಸಂಪೂರ್ಣತಾ ಅಭಿಯಾನ ಅಂಗವಾಗಿ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಕುರ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಸಂಭ್ರಮದೊಂದಿಗೆ ಆಚರಿಸಲಾಯಿತು. ಐವಿಡಿಪಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ವಿಶೇಷ ಆಸಕ್ತಿ ಮತ್ತು ಅರಿವು ಮೂಡಿಸಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಾವೇ ವಿಜ್ಞಾನಿಗಳಾಗಿ ವಿವಿಧ ಸರಳ ಹಾಗೂ ಮನರಂಜನಾತ್ಮಕ ಪ್ರಯೋಗಗಳನ್ನು ಪ್ರದರ್ಶಿಸಿದರು. “ಏನು? ಏಕೆ? ಹೇಗೆ?” ಎಂಬ ಮೂಲಭೂತ ಪ್ರಶ್ನೆಗಳ ಮೂಲಕ ಪ್ರತಿಯೊಂದು ಪ್ರಯೋಗದ ಹಿಂದೆ ಇರುವ ವೈಜ್ಞಾನಿಕ ತತ್ವಗಳನ್ನು ತಿಳಿದುಕೊಳ್ಳುವ ಅವಕಾಶ ಅವರಿಗೆ ಲಭಿಸಿತು. ಶಿಕ್ಷಕರು ಸುಲಭ ಮತ್ತು ಸ್ಪಷ್ಟ ವಿಧಾನದಲ್ಲಿ ವಿವರಣೆ ನೀಡುವ ಮೂಲಕ ಮಕ್ಕಳ ಕುತೂಹಲವನ್ನು ಇನ್ನಷ್ಟು ಉತ್ತೇಜಿಸಿದರು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ವೇದಿಕೆ ಭಯ ನಿವಾರಣೆ ಹಾಗೂ ತಂಡ ಸಹಕಾರದ ಮನೋಭಾವ ಈ ಕಾರ್ಯಕ್ರಮದ ಮೂಲಕ ಹೆಚ್ಚಾಯಿತು. ಪ್ರಯೋಗಾಧಾರಿತ ಕಲಿಕೆಯ ಮಹತ್ವವನ್ನು ಮನಗಂಡು, ವಿಜ್ಞಾನ ಚಿಂತನೆಯ ಬೀಜ ಬಿತ್ತುವ ಉದ್ದೇಶವನ್ನು ಯಶಸ್ವಿಯಾಗಿ ಸಾಧಿಸಲಾಯಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 