ಸಚಿವ ಬೆಂಗಾಲು ವಾಹನಕ್ಕೆ ಸ್ಕೂಟಿ ಡಿಕ್ಕಿ
Scooter rams into Minister Bengalu's vehicle
ಕಾರವಾರ 04 : ಆರೋಗ್ಯ ಸಚಿವ ಯು.ಟಿ .ಖಾದರ್ ಅವರು ಕಾರವಾರ ದಿಂದ ಉಡುಪಿ ಕಡೆಗೆ ತೆರಳುವಾಗ , ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿಯಾಗಿದೆ. ಅಂಕೋಲಾ ಸನಿಹ ಬಾಳೆಗುಳಿ ಎಂಬಲ್ಲಿ ಹೆದ್ದಾರಿ ಮೇಲೆ ವರದರಾಜ ಹೋಟೆಲ್ ಬಳಿ ಅಪಘಾತ ನಡೆದಿದೆ ಎಂದು ಪೋಲೀಸರು ತಿಳಿಸಿದ್ದಾರೆ.ಸ್ಕೂಟಿ ಸವಾರ ಗಂಭೀರ ಗಾಯಗೊಂಡಿದ್ದಾನೆ ಎನ್ನಲಾಗಿದೆ.ಅಪಘಾತವಾಗುತಿದ್ದಂತೆ ವಿಷಯ ಅರಿತ ಸಚಿವರು ಸ್ವತಃ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಲಗೇರಿ ಮೂಲದ ಸಂದೀಪ್ ನಾಯಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವ.ಅಂಕೋಲಾ ಪಟ್ಟಣದ ಆರ್ಯ ಮೆಡಿಕಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು ,ತಲೆಗೆ ಪೆಟ್ಟಾಗಿದೆ ಎನ್ನಲಾಗಿದೆ. ಘಟನೆ ಸಂಬಂಧ ಅಂಕೋಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 