ಸ್ಕೌಟ್ಸ್-ಗೈಡ್ಸ್ ಮಕ್ಕಳಿಂದ ಪರಿಸರ ದಿನಾಚರಣೆ
Scouts-Guides children celebrate Environment Day
ಸವದತ್ತಿ:- "ಸ್ಕೌಟ್ಸ್-ಗೈಡ್ಸ್ ಎಂಬುದು ಸೇವೆಗಾಗಿ ಇರುವ ಸಂಸ್ಥೆಯಾಗಿದ್ದು ಮಕ್ಕಳಿಗೆ ಸೇವಾ ಮನೋಭಾವನೆ ಬೆಳೆಸುವ ಜೊತೆಗೆ ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ, ಆದುದರಿಂದ ಪರಿಸರ ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ಗಿಡಮರಗಳನ್ನು ನೆಟ್ಟು ಪೋಷಿಸಬೇಕು" ಎಂದು ಕುಮಾರೇಶ್ವರ ವಿದ್ಯಾಮಂದಿರದ ಚೇರಮನ್ ಶ್ರೀಕಾಂತ ಮಿರಜಕರ ತಮ್ಮ ಅಭಿಪ್ರಾಯ ಹಂಚಿಕೊಂಡರು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸವದತ್ತಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಸ್ಥಳೀಯ ಸಂಸ್ಥೆ ಸವದತ್ತಿ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಬೆಳಗಾವಿ ಹಾಗೂ ಶ್ರೀ ರೇಣುಕಾ ಶುಗರ್ಸ್ ಲಿಮಿಟೆಡ್ ಮುನವಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕುಮಾರೇಶ್ವರ ವಿದ್ಯಾಮಂದಿರ ಮುನವಳ್ಳಿಯಲ್ಲಿ "ವಿಶ್ವ ಪರಿಸರ ದಿನಾಚರಣೆ" ಮತ್ತು ಸ್ಕೌಟ್ಸ್-ಗೈಡ್ಸ್ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಂತರ ಮಾತನಾಡಿದ ಬಿಇಓ ಮೋಹನ ದಂಡಿನ ಸ್ಕೌಟ್ಸ್-ಗೈಡ್ಸ್ ಮಕ್ಕಳಿಗೆ ಶಾಲೆಗಳಲ್ಲಿ ಹಾಗೂ ಜೀವನದಲ್ಲಿ ಶಿಸ್ತು ಕಲಿಸುವುದರ ಜೊತೆಗೆ ದೇಶಪ್ರೇಮ ಬೆಳೆಸಲು ಸಹಾಯಕಾರಿಯಾಗಿದೆ, ಜೊತೆಗೆ ಮುಂದಿನ ನೂರು ವರ್ಷಗಳ ಭವಿಷ್ಯಕ್ಕಾಗಿ ನಾವು ಪರಿಸರ ರಕ್ಷಣೆಗಾಗಿ ಸುಶಿಕ್ಷಿತರಾಗಬೇಕಾಗಿದೆ ಎಂದರು.ಪ್ರಾಸ್ತಾವಿಕವಾಗ ಸ್ಕೌಟ್ಸ್-ಗೈಡ್ಸ್ ಕಾರ್ಯದರ್ಶಿ ಎನ್.ಎನ್.ಕಬ್ಬೂರ ಮಾತನಾಡಿದರು, ಶ್ರೀ ರೇಣುಕಾ ಶುಗರ್ಸ್ ಲಿಮಿಟೆಡ್ ಮುನವಳ್ಳಿಯ ರಾಘವೇಂದ್ರ ಕುಲಕರ್ಣಿ ತಮ್ಮ ಅಭಿಪ್ರಾಯ ಹಂಚಿಕೊಂಡರು. ಸಂಜೀವ ಕುಮಾರ ನಾಯ್ಕ, ಬಸವರಾಜ ಕಬ್ಬೂರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನಂತರ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಮಕ್ಕಳಿಗೆ ಹಮ್ಮಿಕೊಂಡಿದ್ದ ಭಾಷಣ, ಚಿತ್ರಕಲೆ, ಪ್ರಬಂಧ, ರಂಗೋಲಿ ಸ್ಪರ್ಧೆಗಳನ್ನು ನಡೆಸಲಾಯಿತು. ಸುಮಾರು 200 ಕ್ಕಿಂತ ಹೆಚ್ಚು ಮಕ್ಕಳು ಸಮವಸ್ತ್ರದೊಂದಿಗೆ ಭಾಗವಹಿಸಿದ್ದರು. ಸ್ಕೌಟ್ಸ್-ಗೈಡ್ಸ್ ಜಿಲ್ಲಾ ಸಂಘಟಕರಾದ ಎಸ್.ಬಿ.ವಿಠ್ಠಲ್, ರಾಜಕುಮಾರ ಕುಂಬಾರ, ಇಸಿಒ ಎಸ್.ಎಸ್.ವಾಗೇರಿ, ಸಿ.ಆರ್.ಪಿಗಳಾದ ಜಿ.ಎಸ್.ಚಿಪ್ಪಲಕಟ್ಟಿ, ಎಮ್.ಎಮ್.ಮುರನಾಳ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ ಸಂಘದ ಅಧ್ಯಕ್ಷ ಕಿರಣ ಕುರಿ, ಗೌರವಾಧ್ಯಕ್ಷ ಎಮ್.ಎಸ್.ಹೊಂಗಲ, ದೈಹಿಕ ಶಿಕ್ಷಕ ಲಕ್ಕನ್ನವರ, ನೌಕರ ಸಂಘದ ಉಪಾಧ್ಯಕ್ಷ ರವಿ ಸಣಕಲ್ಲ, ಶಿಕ್ಷಕರಾದ ಸುನಿಲ ಏಗನಗೌಡ್ರ, ಶಾಲೆಯ ಎಲ್ಲ ಸಿಬ್ಬಂದಿ ಮತ್ತು ಮಕ್ಕಳು ಭಾಗವಹಿಸಿದ್ದರು, ಸಿ.ಆರ್.ಪಿ ಎನ್.ಎ.ಹೊನ್ನಳ್ಳಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು, ಮುಖ್ಯ ಶಿಕ್ಷಕ ಶಂಕರ ರಾಠೋಡ ವಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 