ಹಾವೇರಿ: ಮೇ 09: ಕೊರೊನ ಪಾಸಿಟಿವ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್ಡೌನ್ ಮಾಡಿರುವ ಸವಣೂರ ಪಟ್ಟಣದ ಎಸ್.ಎಂ.ಕೃಷ್ಣ ಬಡಾವಣೆಗೆ ಗೃಹ ಸಚಿವ ಹಾಗೂ ಜಿಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿ ಅವರೊಂದಿಗೆ ಮಾತನಾಡಿದ ಸಚಿವರು, ನಿಮ್ಮ ಆರೋಗ್ಯ ಕಾಳಜಿಯಿಂದ ಕೋವಿಡ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೀಲ್ಡೌನ್ ಮಾಡಲಾಗಿದೆ. ಎಲ್ಲರೂ ಸಹಕರಿಸಬೇಕು. ಸೀಲ್ಡೌನ್ ನಿಯಮಗಳನ್ನು 14 ದಿನಗಳವರೆಗೆ ಶಿಸ್ತುಬದ್ಧವಾಗಿ ನೀವು ಪಾಲಿಸಿದರೆ ತೆರವುಗೊಳಿಸಲಾಗುವುದು. ಸೀಲ್ಡೌನ್ ಅವಧಿಯಲ್ಲಿ ನಿಮಗೆ ಬೇಕಾದ ಎಲ್ಲ ಅಗತ್ಯ ವಸ್ತುಗಳನ್ನು ಸರ್ಕಾರದ ವತಿಯಿಂದ ಪೂರೈಸಲಾಗುವುದು. ಅಶಿಸ್ತಿನಿಂದ ವತರ್ಿಸಿ ಸೀಲ್ಡೌನ್ ಉಲ್ಲಂಘಿಸಿ ಸೋಂಕು ಹರಡಲು ಕಾರಣವಾದರೆ ಕಠಿಣ ಕ್ರಮಕೈಗೊಳ್ಳಲಾಗುವುದು. ಸೀಲ್ಡೌನ್ ಅವಧಿಯನ್ನು ಹೆಚ್ಚಿಸಲಾಗುವುದು ಎಂಬ ಎಚ್ಚರಿಕೆ ಸಂದೇಶವನ್ನು ಬಡಾವಣೆಯ ನಿವಾಸಿಗಳಿಗೆ ಈ ಸಂದರ್ಭದಲ್ಲಿ ನೀಡಿದರು.
ಈಗಾಗಲೇ ತಮಗೆ ಅಗತ್ಯವಾದ ದಿನಸಿಗಳನ್ನು ಉಚಿತವಾಗಿ ನೀಡಲಾಗಿದೆ. ಉಚಿತ ಹಾಲು ಸಹ ಒದಗಿಸಲಾಗಿದೆ. ನಿಮ್ಮ ಬೇಡಿಕೆಯಂತೆ ಸಕರ್ಾರದ ವತಿಯಿಂದಲೇ ಉಚಿತವಾಗಿ ತರಕಾರಿ ಸಹ ಭಾನುವಾರದಿಂದ ಪೂರೈಸಲಾಗುವುದು. ರೇಷನ್ ಖಾಲಿಯಾದರೆ ಸೀಲ್ಡೌನ್ ಅವಧಿವರೆಗೆ ಅಗತ್ಯವಾದ ದಿನಸಿ, ತರಕಾರಿ, ಹಾಲು ಪೂರೈಸಲು ಎಲ್ಲ ಕ್ರಮಕೈಗೊಳ್ಳಲಾಗುವುದು. ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ಸಹ ನೀಡಲಾಗುವುದು. ನಿಮಗೆ ಬೇಕಾದ ನೆರವು ಒದಗಿಸಲು ನಾವು ಸಿದ್ಧರಿದ್ದೇವೆ. ನೀವೆಲ್ಲರೂ ಕೋವಿಡ್ ನಿಯಂತ್ರಣಕ್ಕೆ ಸೀಲ್ಡೌನ್ ನಿಯಮ ಹಾಗೂ ಬಫರ್ ಜೋನ್ ನಿಯಮಗಳನ್ನು ಪಾಲಿಸಿ ಸಹಕರಿಸುವಂತೆ ತಿಳಿಸಿದರು.
ಸ್ವಚ್ಛತೆಗೆ ಸೂಚನೆ: ಇದೇ ಸಂದರ್ಭದಲ್ಲಿ ಸವಣೂರು ತಹಶೀಲ್ದಾರ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಸೀಲ್ಡೌನ್ ಪ್ರದೇಶದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲು ಸೂಚಿಸಿದರು. ಕ್ರಿಮಿನಾಶಕ ಸಿಂಪರಣೆ, ಶುದ್ಧ ನೀರಿನ ಪೂರೈಕೆ ಕುರಿತಂತೆ ಆದ್ಯತೆ ಮೇರೆಗೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.ಸೀಲ್ಡೌನ್ ಏರಿಯಾದ ವಸತಿ ನಿಲಯದಲ್ಲಿ ಆರಂಭದಲ್ಲಿ ಫಿವರ್ ಕ್ಲಿನಿಕ್ನಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಳಮಾಡಬೇಕು. ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಿಬ್ಬಂದಿಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿ ದಿನದ 24 ತಾಸು ಕಾರ್ಯನಿರ್ವಹಿಸುವಂತೆ ಕ್ರಮವಹಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಸೀಲ್ಡೌನ್ ಏರಿಯಾದಲ್ಲಿ 100 ಮೀಟರ್ ಅಂತರದಲ್ಲಿ ಮೊದಲ ರ್ಯಾಂಡಮ್ ತಪಾಸಣೆ ಹಾಗೂ ಎರಡನೇ ಹಂತದಲ್ಲಿ 200 ಮೀಟರ್ನಲ್ಲಿ ರ್ಯಾಂಡಮ್ ಸ್ಯಾಂಪಲ್ಗಳನ್ನು ತಪಾಸಣೆಯನ್ನು ಕೈಗೊಳ್ಳಬೇಕು. ಆರೋಗ್ಯ ತಪಾಸಣೆ ಕೈಗೊಳ್ಳಬೇಕು. ಸೀಲ್ಡೌನ್ ಏರಿಯಾದಲ್ಲಿ ತೀವ್ರ ನಿಗಾವಹಿಸಿ ತಪಾಸಣೆ, ಮಾದರಿ ಸಂಗ್ರಹ, ಆರೋಗ್ಯದ ಮೇಲೆ ನಿಗಾ ವಹಿಸುವ ಕಾರ್ಯಕ್ರಮವನ್ನು ಕೈಗೊಳ್ಳುವಂತೆ ತಾಲೂಕಾ ಆರೋಗ್ಯಾಧಿಕಾರಿಗಳ ತಂಡಕ್ಕೆ ಸೂಚನೆ ನೀಡಿದರು.
ಗಭರ್ಿಣಿಯರು ಸೇರಿದಂತೆ ತೀವ್ರ ಆರೋಗ್ಯ ಸಮಸ್ಯೆ ಇರುವ ಜನರನ್ನು ತಾಲೂಕಾ ಐಸೋಲೇಷನ್ ಕೇಂದ್ರದಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಬೇಕು. ಎಲ್ಲ ಸ್ವಾಬ್ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಬೇಕು ಎಂದು ಸೂಚನೆ ನೀಡಿದರು.
ಶಿಸ್ತು ಉಲ್ಲಂಘನೆಗೆ ಅವಕಾಶ ಇಲ್ಲ: ಸೀಲ್ಡೌನ್ ಏರಿಯಾವನ್ನು ವೀಕ್ಷಣೆಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಮುಂಬೈನಿಂದ ಸವಣೂರಿನ ಎಸ್.ಎಂ.ಕೃಷ್ಣ ಬಡಾವಣೆಯ ಇಬ್ಬರಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್ಡೌನ್ ಮಾಡಲಾಗಿದೆ. ಈಗಾಗಲೇ ಸಂಬಂಧ 20 ಜನರನ್ನು ಧಾರವಾಡ ಜಿಲ್ಲಾಡಳಿತ ಕ್ವಾರಂಟೈನ್ಗೆ ಒಳಪಡಿಸಿದೆ ಎಂದು ತಿಳಿಸಿದರು.
ಈಗಾಗಲೇ ಸೀಲ್ಡೌನ್ ಪ್ರದೇಶದಲ್ಲಿ ಆರೋಗ್ಯ ತಪಾಸಣೆ ನಡೆಯುತ್ತಿದೆ. ಸೋಂಕಿತರ ಮನೆಯ 100 ಮೀಟರ್ ವ್ಯಾಪ್ತಿಯಲ್ಲಿ ರ್ಯಾಂಡಮ್ ಆಗಿ ಗಂಟಲು ಮಾದರಿ ದ್ರವ್ಯ ಸಂಗ್ರಹಿಸಲಾಗುತ್ತಿದೆ ಹಾಗೂ ಎರಡನೇ ಹಂತದಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ರ್ಯಾಂಡಮ್ ಆಗಿ ಮತ್ತೊಮ್ಮೆ ಗಂಟಲು ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್ ವರದಿಗೆ ಕಳುಹಿಸಲಾಗುತ್ತದೆ. ರೋಗ ಲಕ್ಷಣ ಇರುವವರನ್ನು ಗುರುತಿಸುವ ಕಾರ್ಯ ಸಹ ವೈದ್ಯಧಿಕಾರಿಗಳಿಂದ ಕೈಗೊಳ್ಳಲಾಗುತ್ತಿದೆ. ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಎಸ್.ಎಂ.ಕೃಷ್ಣ ಬಡಾವಣೆಯನ್ನು ಈಗಾಗಲೇ ಸೀಲ್ಡೌನ್ ಮಾಡಲಾಗಿದೆ. ಸವಣೂರ ಪಟ್ಟಣ ಭಾಗವನ್ನು ಬಫರ್ ಜೋನ್ ಎಂದು ಘೋಷಿಸಿ ಕಠಿಣವಾದ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ. ಇಲ್ಲಿಯ ಜನತೆ ಈವರೆಗೆ ನೀಡಿದ ಸಹಕಾರಕ್ಕಿಂತ ಹೆಚ್ಚಿನ ಸಹಕಾರವನ್ನು ನೀಡಬೇಕಾಗಿದೆ. ಶಿಸ್ತು ಉಲ್ಲಂಘನೆಗೆ ಅವಕಾಶ ನೀಡುವುದಿಲ್ಲ. ಕೋವಿಡ್ ಬೇಗ ನಿಯಂತ್ರಣಕ್ಕೆ ಬರಲು ಎಲ್ಲರ ಸಹಕಾರ ಹಾಗೂ ನಿಯಮಗಳ ಪಾಲನೆ ಅತ್ಯವಶ್ಯವಾಗಿದೆ. ನಿಯಮಗಳ ಉಲ್ಲಂಘನೆ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು. ಜನರ ಆರೋಗ್ಯದ ಹಿತದೃಷ್ಟಿಯಿಂದ ಯಾವುದೇ ರಾಜೀಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ರಮೇಶ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಮನಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಾಗರಾಜ ನಾಯಕ, ಉಪವಿಭಾಗಾಧಿಕಾರಿಗಳಾದ ಶ್ರೀಮತಿ ಅನ್ನಪೂರ್ಣ ಮುದಕಮ್ಮನವರ, ಡಾ.ದಿಲೀಷ್ ಶಶಿ, ತಹಶೀಲ್ದಾರ ಮಲ್ಲಿಕಾಜರ್ುನ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.