ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ

ಶ್ರೀನಗರ, ಫೆ. 5, ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರ ಜಿಲ್ಲೆಯ ಕುಲ್ಗಾಂನಲ್ಲಿ ಬುಧವಾರ ಶೋಧ ಕಾರ್ಯಾಚರಣೆಯನ್ನು (ಸಿಎಎಸ್ಒ) ಪ್ರಾರಂಭಿಸಿವೆ.ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ, ಜಂಟಿಯಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ನ ವಿಶೇಷ ಕಾರ್ಯಾಚರಣಾ ಪಡೆ (ಎಸ್‌ಒಜಿ), ಸೇನೆ ಮತ್ತು ಸಿಆರ್‌ಪಿಎಫ್‌ ಜಂಟಿಯಾಗಿ ಕುಲ್ಗಾಂನ ಬುಗಾಮ್‌ ಎಂಬಲ್ಲಿ ಬುಧವಾರ ಮುಂಜಾನೆ ಕಾರ್ಯಾಚರಣೆ ಪ್ರಾರಂಭಿಸಿದೆ ಎಂದು ಅಧಿಕೃತ ಮೂಲಗಳು ಯುಎನ್ಐಗೆ ತಿಳಿಸಿವೆ.ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಶೋಧ ನಡೆಸುತ್ತಿವೆ ಎಂದು ಅವರು ಹೇಳಿದರು. "ಹತ್ತಿರದ ತೋಟಗಳು ಮತ್ತು ಹೊಲಗಳಲ್ಲಿ ಹುಡುಕಾಟಗಳು ನಡೆಯುತ್ತಿವೆ" ಎಂದು ಅವರು ಹೇಳಿದರು. ಆದರೆ, ಇದುವರೆಗೆ ಉಗ್ರರ ಪತ್ತೆಯಾಗಿಲ್ಲ ಎಂದು ಅವರು ಹೇಳಿದರು.