ಸಂಸದರಾಗಿ ಆಯ್ಕೆಯಾದ ಇಬ್ಬರು ಮಾಜಿ ಸಿಎಂಗಳಿಗೆ ಆಸನ ಮೀಸಲು

Seat reservation for two former CMs elected as MPs

ಸುವರ್ಣ ವಿಧಾನಸೌಧ 09 : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನವು ಸೋಮವಾರದಿಂದ ಪ್ರಾರಂಭವಾಗಿದ್ದು, ಚಳಿಗಾಲದ ಅಧಿವೇಶನದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರೂ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಆಸನ ಮೀಸಲು ಮಾಡಲಾಗಿದೆ. 

ಸುವರ್ಣ ವಿಧಾನಸಭೆಯಲ್ಲಿ ಮಾಜಿ ಶಾಸಕರ ಹೆಸರಿನಲ್ಲೇ ಆಸನಗಳು ಮೀಸಲಿವೆ. ದಿವ್ಯ ನಿರ್ಲಕ್ಷ್ಯದಿಂದ ಬೆಳಗಾವಿ ಜಿಲ್ಲಾಡಳಿತ ನಗೆಪಾಟಿಲೀಗೀಡಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಹೆಚ್‌.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಅವರು ಸಂಸದರಾಗಿ ಆಯ್ಕೆಯಾಗಿದ್ದರೂ ಅವರ ಹೆಸರಲ್ಲಿ ಆಸನ ಮೀಸಲಿಡಲಾಗಿದೆ.  

ಇಬ್ಬರು ಸಂಸದರಾಗಿ ಆಯ್ಕೆಯಾಗಿ ಅವರ ಸ್ಥಾನಕ್ಕೆ ಶಾಸಕರಾಗಿ ಆಯ್ಕೆಯಾಗಿರುವ ಇಬ್ಬರು ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸುವ ವೇಳೆ ಕೂಡಾ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ವಿಧಾನ ಸಭೆಯ ಸಭಾಂಗಣದಲ್ಲಿ ಆಸನ ಮೀಸಲು ಮಾಡಲಾಗಿದೆ. ಉಪಚುನಾವಣೆಯಲ್ಲಿ ಗೆದ್ದ ಶಾಸಕರಿಂದ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಶಿಗ್ಗಾಂವಿ ಶಾಸಕ ಯಾಸೀರ್‌ಖಾನ್ ಪಠಾಣ್, ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ, ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂವರ ಹೆಸರನ್ನು ಸೇರೆ​‍್ಡ ಮಾಡಬೇಕಿದ್ದ ಬೆಳಗಾವಿ ಜಿಲ್ಲಾಡಳಿತ ದಿವ್ಯ ನಿರ್ಲಕ್ಷ್ಯ ವಹಿಸಿರುವದು ಕಂಡು ಬಂದಿದೆ.