ಪುರುಷರಿಗೆ ಮೀಸಲಿರುವ ಸೀಟುಗಳನ್ನು ಪುರುಷರಿಗೆ ಬಿಟ್ಟುಕೊಡಬೇಕು: ಕೆಎಸ್‌ಆರ್‌ಟಿಸಿ

Seats reserved for men should be given up to men: KSRTC

ಬೆಂಗಳೂರು 21: ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್‌ಆರ್‌ಟಿಸಿ ಸೂಚನೆ ನೀಡಿದೆ.

ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹೀಗಾಗಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಸೀಟುಗಳನ್ನು ಪುರುಷರಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಗಮನ ಹರಿಸಬೇಕು ಎಂದು ಕೆಎಸ್ಆರ್​ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕರು ಹಾಗೂ ಸಿಬ್ಬಂದಿಗೆ ಆದೇಶ ಹೊರಡಿಸಿದ್ದಾರೆ.